‘ಎಲ್ಲ ಕಡೆ ಒಳ್ಳೆಯ ರಿಪೋರ್ಟ್ ಇದೆ’: ಮಾರ್ಟಿನ್ ಬಿಡುಗಡೆ ಬಳಿಕ ಧ್ರುವ ಸರ್ಜಾ ಪ್ರತಿಕ್ರಿಯೆ
ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಸಿನಿಮಾ ಹಲವು ಕಡೆಗಳಲ್ಲಿ ಹೌಸ್ಫುಲ್ ಆಗಿದೆ. ಇದರಿಂದ ಚಿತ್ರತಂಡಕ್ಕೆ ಖುಷಿ ಆಗಿದೆ. ಹಬ್ಬದ ದಿನವೇ ಜನರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿರುವುದರಿಂದ ಧ್ರುವ ಸರ್ಜಾ ಅವರು ನಗುನಗುತ್ತಾ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ವೀಕೆಂಡ್ನಲ್ಲಿ ಎಲ್ಲ ಕಡೆ ಉತ್ತಮ ಪ್ರದರ್ಶನ ಕಾಣಲಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.
‘ಹೈದರಾಬಾದ್ ಮುಂತಾದ ಕಡೆಗಳಲ್ಲಿ ಮಾರ್ಟಿನ್ ಸಿನಿಮಾಗೆ ಉತ್ತಮವಾಗಿ ಪ್ರತಿಕ್ರಿಯೆ ಸಿಕ್ಕಿದೆ. ರಾಜ್ಯಾದ್ಯಂತ ಒಳ್ಳೆಯ ರಿಪೋರ್ಟ್ ಸಿಗುತ್ತಿದೆ. ಮಕ್ಕಳು, ತಾಯಂದಿರು ಬಂದು ಸಿನಿಮಾ ನೋಡುತ್ತಿದ್ದಾರೆ ಎಂಬುದೇ ನಿಜವಾದ ಖುಷಿ. ನಮ್ಮ ಮೂರು ವರ್ಷದ ಶ್ರಮವನ್ನು ನೀವು ಎರಡೂವರೆ ಗಂಟೆಯಲ್ಲಿ ನೋಡಬಹುದು. ಎಲ್ಲ ಕಡೆಗಳಲ್ಲಿ ಹೌಸ್ಫುಲ್ ಅಂತ ಕೇಳಿದಾಗ ನಿಜಕ್ಕೂ ಖುಷಿ ಆಯಿತು’ ಎಂದು ಧ್ರುವ ಸರ್ಜಾ ಹೇಳಿದ್ದಾರೆ. ಈ ಸಿನಿಮಾಗೆ ಎ.ಪಿ. ಅರ್ಜುನ್ ನಿರ್ದೇಶನ ಮಾಡಿದ್ದು, ಉದಯ್ ಮೆಹ್ತಾ ಬಂಡವಾಳ ಹೂಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos