‘ಎಲ್ಲ ಕಡೆ ಒಳ್ಳೆಯ ರಿಪೋರ್ಟ್ ಇದೆ’: ಮಾರ್ಟಿನ್​ ಬಿಡುಗಡೆ ಬಳಿಕ ಧ್ರುವ ಸರ್ಜಾ ಪ್ರತಿಕ್ರಿಯೆ

Updated on: Oct 11, 2024 | 4:35 PM

ಧ್ರುವ ಸರ್ಜಾ ನಟನೆಯ ‘ಮಾರ್ಟಿನ್​’ ಸಿನಿಮಾ ಹಲವು ಕಡೆಗಳಲ್ಲಿ ಹೌಸ್​ಫುಲ್​ ಆಗಿದೆ. ಇದರಿಂದ ಚಿತ್ರತಂಡಕ್ಕೆ ಖುಷಿ ಆಗಿದೆ. ಹಬ್ಬದ ದಿನವೇ ಜನರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿರುವುದರಿಂದ ಧ್ರುವ ಸರ್ಜಾ ಅವರು ನಗುನಗುತ್ತಾ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ವೀಕೆಂಡ್​ನಲ್ಲಿ ಎಲ್ಲ ಕಡೆ ಉತ್ತಮ ಪ್ರದರ್ಶನ ಕಾಣಲಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.

‘ಹೈದರಾಬಾದ್​ ಮುಂತಾದ ಕಡೆಗಳಲ್ಲಿ ಮಾರ್ಟಿನ್ ಸಿನಿಮಾಗೆ ಉತ್ತಮವಾಗಿ ಪ್ರತಿಕ್ರಿಯೆ ಸಿಕ್ಕಿದೆ. ರಾಜ್ಯಾದ್ಯಂತ ಒಳ್ಳೆಯ ರಿಪೋರ್ಟ್​ ಸಿಗುತ್ತಿದೆ. ಮಕ್ಕಳು, ತಾಯಂದಿರು ಬಂದು ಸಿನಿಮಾ ನೋಡುತ್ತಿದ್ದಾರೆ ಎಂಬುದೇ ನಿಜವಾದ ಖುಷಿ. ನಮ್ಮ ಮೂರು ವರ್ಷದ ಶ್ರಮವನ್ನು ನೀವು ಎರಡೂವರೆ ಗಂಟೆಯಲ್ಲಿ ನೋಡಬಹುದು. ಎಲ್ಲ ಕಡೆಗಳಲ್ಲಿ ಹೌಸ್​ಫುಲ್​ ಅಂತ ಕೇಳಿದಾಗ ನಿಜಕ್ಕೂ ಖುಷಿ ಆಯಿತು’ ಎಂದು ಧ್ರುವ ಸರ್ಜಾ ಹೇಳಿದ್ದಾರೆ. ಈ ಸಿನಿಮಾಗೆ ಎ.ಪಿ. ಅರ್ಜುನ್​ ನಿರ್ದೇಶನ ಮಾಡಿದ್ದು, ಉದಯ್​ ಮೆಹ್ತಾ ಬಂಡವಾಳ ಹೂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More