‘KD’ ಚಿತ್ರದಲ್ಲಿ ಶಿಲ್ಪಾ ಶೆಟ್ಟಿ ನಟಿಸುವುದು ಬಹುತೇಕ ಖಚಿತ: ಸುಳಿವು ನೀಡಿದ ಧ್ರುವ ಸರ್ಜಾ
ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ 'ಕೆಡಿ' ಚಿತ್ರದ ಮೂಲಕ ಮತ್ತೆ ಸ್ಯಾಂಡಲ್ವುಡ್ಗೆ ಎಂಟ್ರಿ ನೀಡಲಿದ್ದಾರೆ ಎಂದು ಸುಳಿವು ನೀಡದ ನಟ ಧ್ರುವ ಸರ್ಜಾ.
ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ಇನ್ನೇನು ‘ಮಾರ್ಟಿನ್’ ಆಗಿ ತೆರೆಗೆ ಬರಲು ಸಿದ್ಧರಾಗಿದ್ದಾರೆ. ಮುಂದಿನ ತಿಂಗಳು ಅಂದರೆ ಡಿಸೆಂಬರ್ನಲ್ಲಿ ಚಿತ್ರದ ಟೀಸರ್ ರಿಲೀಸ್ ಆಗಲಿದೆ. ಜೊತೆಗೆ ಧ್ರುವ ಸರ್ಜಾ ಅವರು ಮುಂದಿನ ತಿಂಗಳಿಂದಲೇ ಪ್ರೇಮ್ ನಿರ್ದೇಶನದ ‘ಕೆಡಿ’ ಸಿನಿಮಾ ಚಿತ್ರೀಕರಣದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ‘ಕೆಡಿ’ ಚಿತ್ರಕ್ಕೆ ಮಾಲಾಶ್ರೀ ಅವರ ಪುತ್ರಿ ರಾಧನಾ ರಾಮ್ ನಟಿಯಾಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಜೊತೆಗೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರು ಕೂಡ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಈ ಕುರಿತಾಗಿ ನಟ ಧ್ರುವ ಸರ್ಜಾ ಮಾತನಾಡಿದ್ದು, ‘ಶಿಲ್ಪಾ ಶೆಟ್ಟಿ ಅವರು ಕೆಡಿ ಚಿತ್ರದಲ್ಲಿ ನಟಿಸುವುದು ಬಹುತೇಕ ಪಕ್ಕಾ ಆಗಿದೆ’ ಎಂದು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Nov 26, 2022 06:17 PM