ಧ್ರುವ ಸರ್ಜಾ ಮ್ಯಾನೇಜರ್​ ಬಂಧನದ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಕಮಿಷನರ್​

Updated on: Sep 10, 2024 | 3:49 PM

‘ಧ್ರುವ ಸರ್ಜಾ ಅವರ ಮ್ಯಾನೇಜರ್​ ಮತ್ತು ಡ್ರೈವರ್ ಸೇರಿಕೊಂಡು ಬೇರೆ ಹುಡುಗರನ್ನು ಕರೆಸಿ ಜಿಮ್​ ಟ್ರೇನರ್​ ಮೇಲೆ ಹಲ್ಲೆ ಮಾಡಿದ್ದರು. ಆ ಕೇಸ್​ನಲ್ಲಿ 4 ಜನರ ಬಂಧನ ಆಗಿದೆ’ ಎಂದು ಬೆಂಗಳೂರು ಪೊಲೀಸ್ ಕಮಿಷನರ್​ ಬಿ. ದಯಾನಂದ ಅವರು ತಿಳಿಸಿದ್ದಾರೆ. ಈ ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ. ತನಿಖೆಯ ಬಳಿಕ ಇನ್ನಷ್ಟು ವಿಚಾರಗಳು ಬಹಿರಂಗ ಆಗಲಿವೆ.

ನಟ ಧ್ರುವ ಸರ್ಜಾ ಅವರ ಮ್ಯಾನೇಜರ್ ಅಶ್ವಿನ್​ ಬಂಧನ ಆಗಿರುವ ಬಗ್ಗೆ ಬೆಂಗಳೂರು ನಗರ ಪೊಲೀಸ್ ಕಮಿಷನರ್​ ಬಿ. ದಯಾನಂದ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಧ್ರುವ ಸರ್ಜಾ ಮ್ಯಾನೇಜರ್​ ಅಶ್ವಿನಿ ಹಾಗೂ ಇನ್ನೂ ಮೂವರನ್ನು ಬಂಧಿಸಲಾಗಿದೆ ಎಂದು ಇಂದು (ಸೆಪ್ಟೆಂಬರ್​ 10) ಅವರು ತಿಳಿಸಿದ್ದಾರೆ. ‘ಧ್ರುವ ಸರ್ಜಾಗೆ ಹತ್ತಿರ ಆಗಬೇಕು ಎಂಬ ಉದ್ದೇಶದಿಂದ ಅವರ ವೈಯಕ್ತಿಕ ಕಾರಣಕ್ಕೆ ಈ ರೀತಿ ನಡೆದಿದೆ. ಆದ್ದರಿಂದ ಬಂಧಿಸಲಾಗಿದೆ’ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More