ಧ್ರುವ ಸರ್ಜಾ ಜಿಮ್ ಟ್ರೈನರ್ ಮೇಲೆ ಹಲ್ಲೆ; ‘ನಮ್ಮ ಹುಡುಗ, ಜೊತೆಗೆ ಇರುತ್ತೇನೆ’ ಎಂದ ನಟ
ಧ್ರುವ ಸರ್ಜಾ ಜಿಮ್ ಟ್ರೇನರ್ ಪ್ರಶಾಂತ್ ಮೇಲೆ ಹಲ್ಲೆ ಆಗಿದೆ. ಈ ಬಗ್ಗೆ ಧ್ರುವ ಪ್ರತಿಕ್ರಿಯೆ ನೀಡಿದ್ದಾರೆ. ‘ವೈಯಕ್ತಿಕ ವಿಚಾರಕ್ಕೆ ಪ್ರಶಾಂತ್ ಮೇಲೆ ಹಲ್ಲೆಯಾಗಿದೆ. ಪ್ರಶಾಂತ್ ನಮ್ ಹುಡುಗ, ಅವನ ಜೊತೆಗಿರುತ್ತೇನೆ. ಪ್ರಶಾಂತ್ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಲಾಗಿದೆ. ಸದ್ಯ ಪ್ರಶಾಂತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ’ ಎಂದಿದ್ದಾರೆ ಧ್ರುವ
ನಟ ಧ್ರುವ ಸರ್ಜಾ (Dhruva Sarja) ಅವರು ಕಟ್ಟುಮಸ್ತಾದ ದೇಹ ಹೊಂದಿದ್ದಾರೆ. ಅವರು ಯಾವಾಗಲೂ ಜಿಮ್ ಮಾಡೋದನ್ನು ತಪ್ಪಿಸುವುದಿಲ್ಲ. ಇದಕ್ಕೆ ಅವರ ಜಿಮ್ ಟ್ರೇನರ್ ಪ್ರಶಾಂತ್ ಅವರ ಶ್ರಮವೂ ಇದೆ. ಈಗ ಪ್ರಶಾಂತ್ ಮೇಲೆ ಹಲ್ಲೆ ನಡೆದಿದೆ. ಬೆಂಗಳೂರಿನ ಬನಶಂಕರಿಯ ಕೆ.ಆರ್.ರಸ್ತೆಯಲ್ಲಿ ಈ ಹಲ್ಲೆ ಆಗಿದೆ. ಅಪರಿಚಿತರು ಬೈಕ್ನಲ್ಲಿ ಬಂದು ಪ್ರಶಾಂತ್ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆ ಬಗ್ಗೆ ಬನಶಂಕರಿ ಪೊಲೀಸರಿಗೆ ಪ್ರಶಾಂತ್ ಮಾಹಿತಿ ನೀಡಿದ್ದಾರೆ. ಈ ಘಟನೆಯ ಬಗ್ಗೆ ನಟ ಧ್ರುವ ಸರ್ಜಾ ಸ್ಪಷ್ಟನೆ ನೀಡಿದ್ದಾರೆ. ‘ವೈಯಕ್ತಿಕ ವಿಚಾರಕ್ಕೆ ಪ್ರಶಾಂತ್ ಮೇಲೆ ಹಲ್ಲೆಯಾಗಿದೆ. ಪ್ರಶಾಂತ್ ನಮ್ ಹುಡುಗ, ಅವನ ಜೊತೆಗಿರುತ್ತೇನೆ. ಪ್ರಶಾಂತ್ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಲಾಗಿದೆ. ಸದ್ಯ ಪ್ರಶಾಂತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ’ ಎಂದು ಧ್ರುವ ಸರ್ಜಾ ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್ ಆಪರೇಷನ್ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ

