‘ಧುರಂಧರ್​ಗಿಂತ ಸೀಕ್ವೆಲ್ ಇನ್ನೂ ಪವರ್​​ಫುಲ್; ಸೂಚನೆ ಕೊಟ್ಟ ನಿರ್ದೇಶಕನ ಪತ್ನಿ ಯಾಮಿ ಗೌತಮ್

Updated on: Feb 05, 2026 | 11:41 AM

‘ಧುರಂಧರ್ 2’ ಸಿನಿಮಾದಲ್ಲಿ ಇನ್ನು ಏನು ಮಾಡಲು ಸಾಧ್ಯ ಎಂಬ ಪ್ರಶ್ನೆ ಅನೇಕರಿಗೆ ಮೂಡಿದೆ. ಈ ಪ್ರಶ್ನೆಗೆ ಸಂಬಂಧಿಸಿದಂತೆ ನಿರ್ದೇಶಕ ಆದಿತ್ಯ ಧಾರ್ ಪತ್ನಿ ಯಾಮಿ ಗೌತಮ್ ಅವರು ಸ್ಪಷ್ಟನೆ ನೀಡಿದ್ದಾರೆ. ಅವರ ಸ್ಪಷ್ಟನೆ ಸಾಕಷ್ಟು ಗಮನ ಸೆಳೆಯುವ ರೀತಿಯಲ್ಲಿ ಇದೆ. ಈ ಸಿನಿಮಾ ತುಂಬಾನೇ ಪವರ್​​ಫುಲ್ ಆಗಿರಲಿದೆಯಂತೆ.

‘ಧುರಂಧರ್’ ಸಿನಿಮಾ ಯಶಸ್ಸು ಕಂಡ ಬಳಿಕ ‘ಧುರಂಧರ್ 2’ ಬಗ್ಗೆ ನಿರೀಕ್ಷೆ ಹುಟ್ಟಿದೆ. ಈ ಚಿತ್ರದಲ್ಲಿ ಏನು ತೋರಿಸುತ್ತಾರೆ ಎಂಬ ಕುತೂಹಲ ಅಭಿಮಾನಿಗಳಿಗೆ ಮೂಡಿತ್ತು. ಇದಕ್ಕೆ ಉತ್ತರ ಸಿಕ್ಕಿದೆ. ನಿರ್ದೇಶಕ ಆದಿತ್ಯ ಧಾರ್ ಪತ್ನಿ ಯಾಮಿ ಗೌತಮ್ ಈ ಬಗ್ಗೆ ಮಾತನಾಡಿದ್ದಾರೆ. ಮೊದಲ ಭಾಗಕ್ಕಿಂತ ಎರಡನೇ ಭಾಗ ಹೆಚ್ಚು ಪವರ್​​ಫುಲ್ ಆಗಿರಲಿದೆ ಎಂದಿದ್ದಾರೆ. 2026ಕ್ಕೆ ಒಂದೊಳ್ಳೆಯ ಚಿತ್ರ ಸಿಕ್ಕಂತೆ ಆಗುತ್ತದೆ ಎಂಬುದು ಅವರ ಅಭಿಪ್ರಾಯ. ಹಲವು ಅತಿಥಿ ಪಾತ್ರಗಳು ಕೂಡ ಸಿನಿಮಾದಲ್ಲಿ ಇರಲಿವೆಯಂತೆ. ಈ ಎಲ್ಲಾ ಕಾರಣದಿಂದ ಅಭಿಮಾನಿಗಳ ನಿರೀಕ್ಷೆ ಹೆಚ್ಚಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More