ಬಿಗ್ ಬಾಸ್​ ಕ್ಯಾಮೆರಾದಲ್ಲಿ ಸೆರೆ ಆಯ್ತು ಮೋಸದ ಆಟ; ಭವ್ಯಾ ಮೇಲೆ ಅನುಮಾನ

Updated on: Dec 27, 2024 | 5:04 PM

ಭವ್ಯಾ ಗೌಡ ಅವರು ಈ ವಾರ ಕ್ಯಾಪ್ಟನ್ ಆಗಿದ್ದರು. ಮುಂದಿನ ವಾರಕ್ಕೆ ಯಾರು ಕ್ಯಾಪ್ಟನ್ ಆಗಬೇಕು ಎಂಬುದನ್ನು ತೀರ್ಮಾನಿಸಲು ಟಾಸ್ಕ್​ ನೀಡಲಾಗಿದೆ. ಆದರೆ ಈ ಟಾಸ್ಕ್​ ನಡೆಯುವಾಗ ಮೋಸ ನಡೆದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಟಾಸ್ಕ್​ ಮುಗಿದ ಬಳಿಕ ಬಿಗ್ ಬಾಸ್ ಸ್ಪರ್ಧಿಗಳು ಚರ್ಚೆ ಮಾಡಿದ್ದಾರೆ. ರಜತ್ ಅವರು ಭವ್ಯಾ ಮಾಡಿದ್ದೇನು ಎಂಬುದನ್ನು ವಿವರಿಸಿದ್ದಾರೆ.

ಕ್ಯಾಪ್ಟೆನ್ಸಿ ಟಾಸ್ಕ್​ ಎಲ್ಲರಿಗೂ ಮುಖ್ಯ. ಹಾಗಂತ ಮೋಸ ಮಾಡಿ ಗೆಲ್ಲುವುದು ಸರಿಯಲ್ಲ. ಈ ವಾರ ಕ್ಯಾಪ್ಟೆನ್ಸಿ ಟಾಸ್ಕ್​ನಲ್ಲಿ ಮೋಸ ನಡೆದಿದೆ ಎಂಬ ಅನುಮಾನ ಮೂಡಿದೆ. ಭವ್ಯಾ ಗೌಡ ಬಗ್ಗೆ ರಜತ್, ಐಶ್ವರ್ಯಾ, ಮೋಕ್ಷಿತಾ, ಉಗ್ರಂ ಮಂಜು ಚರ್ಚೆ ಮಾಡಿದ್ದಾರೆ. ಭವ್ಯಾ ಮೋಸ ಮಾಡಿದ್ದನ್ನು ಕಣ್ಣಾರೆ ನೋಡಿದ್ದಾಗಿ ರಜತ್ ಅವರು ಹೇಳಿದ್ದಾರೆ. ಡಿ.27ರ ಸಂಚಿಕೆಯಲ್ಲಿ ಇದರ ಬಗ್ಗೆ ಪೂರ್ತಿ ವಿವರ ಸಿಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More