ವಿಧಾನಸಭೆಯಲ್ಲಿ ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ!

Updated on: Jan 22, 2026 | 1:00 PM

ವಿಧಾನಸಭೆ ವಿಶೇಷ ಅಧಿವೇಶನ ಸಂದರ್ಭದಲ್ಲಿ ನಡೆದ ಹೈಡ್ರಾಮಾದ ವೇಳೆ ಬಿಜೆಪಿ ನಾಯಕರು ತಮ್ಮ ಬಟ್ಟೆ ಹರಿದಿದ್ದಾರೆ ಎಂದು ಕಾಂಗ್ರೆಸ್​ ಎಂಎಲ್​ಸಿ ಬಿಕೆ ಹರಿಪ್ರಸಾದ್ ಆರೋಪಿಸಿದ್ದಾರೆ. ಆದರೆ, ವಿಧಾನಸಭೆ ಕಲಾಪದ ನೇರ ಪ್ರಸಾರದ ವಿಡಿಯೋದಲ್ಲಿ ಮಾರ್ಷಲ್​​ಗಳ ಜತೆ ಅವರು ಜಟಾಪಟಿ ನಡೆಸುತ್ತಿರುವುದು ಕಾಣಿಸಿದೆ. ಈ ಸಂದರ್ಭ ಅವರ ಬಟ್ಟೆ ಹರಿದಿದೆ ಎನ್ನಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.

ಬೆಂಗಳೂರು, ಜನವರಿ 22: ಕರ್ನಾಟಕ ವಿಧಾನಸಭೆ ವಿಶೇಷ ಅಧಿವೇಶನದ ಆರಂಭದಲ್ಲಿ ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್ ಒಂದೇ ವಾಕ್ಯದಲ್ಲಿ ಭಾಷಣ ಮುಗಿಸಿ ನಿರ್ಗಮಿಸುವ ವೇಳೆ ನಡೆದ ಹೈಡ್ರಾಮಾದಲ್ಲಿ ಕಾಂಗ್ರೆಸ್​ ಎಂಎಲ್ಸಿ ಬಿಕೆ ಹರಿಪ್ರಸಾದ್ ಬಟ್ಟೆ ಹರಿದಿದೆ. ಬಿಜೆಪಿಯವರೇ ಬಟ್ಟೆ ಎಳೆದು ಹರಿದಿದ್ದಾರೆ ಎಂದು ಹರಿಪ್ರಸಾದ್ ಆರೋಪಿಸಿದ್ದಾರೆ. ರಾಜ್ಯಪಾಲರು ವಿಧಾನಸಭೆಯಿಂದ ಹೊರಗೆ ತೆರಳುತ್ತಿದ್ದ ವೇಳೆ ವಿಧಾನ ಪರಿಷತ್ ಸದಸ್ಯರಾದ ಬಿ.ಕೆ. ಹರಿಪ್ರಸಾದ್, ಐವಾನ್ ಡಿಸೋಜಾ, ಶಾಸಕರಾದ ಶರತ್ ಬಚ್ಚೇಗೌಡ, ಪ್ರದೀಪ್ ಈಶ್ವರ್, ಹೆಚ್.ಸಿ. ಬಾಲಕೃಷ್ಣ ಘೋಷಣೆ ಕೂಗುತ್ತಿದ್ದರು. ಈ ವೇಳೆ ಬಿ.ಕೆ. ಹರಿಪ್ರಸಾದ್ ಅವರನ್ನು ಮಾರ್ಷಲ್​ಗಳು ಅಲುಗಾಡಲು ಸಾಧ್ಯವಾಗದಂತೆ ಪಕ್ಕಕ್ಕೆ ಎಳೆದೊಯ್ದಿದ್ದು ಬಿಟ್ಟಿದ್ದು ವಿಡಿಯೋದಲ್ಲಿ ಕಾಣಿಸಿದೆ. ಇದರಿಂದ ಸಿಟ್ಟಿಗೆದ್ದ ಬಿ.ಕೆ. ಹರಿಪ್ರಸಾದ್ ಮತ್ತು ಹೆಚ್.ಸಿ. ಬಾಲಕೃಷ್ಣ ವಾಪಸ್ ಬಂದು ಮಾರ್ಷಲ್ ಹಿಡಿದು ಎಳೆದು ಆಕ್ರೋಶ ವ್ಯಕ್ತಪಡಿಸಿದ್ದರು. ಈ ವೇಳೆ, ಹರಿಪ್ರಸಾದ್ ಬಟ್ಟೆ ಹರಿದಿದೆ ಎನ್ನಲಾಗಿದೆ. ವಿಡಿಯೋ ಇಲ್ಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ