ವಿಧಾನಸಭಾ ಚುನಾವಣೆಯಲ್ಲೇ ಯತೀಂದ್ರ ಜೊತೆ ಒಪ್ಪಂದವಾಗಿದ್ದರಿಂದ ಅವರ ಹೆಸರು ಚರ್ಚಿಸುವ ಅಗತ್ಯವಿರಲಿಲ್ಲ: ಡಿಕೆ ಶಿವಕುಮಾರ್

|

Updated on: May 30, 2024 | 6:25 PM

ಯತೀಂದ್ರ ಸಿದ್ದರಾಮಯ್ಯ ಹೆಸರನ್ನು ಯಾವುದೇ ಚರ್ಚೆಯಿಲ್ಲದೆ ಫೈನಲ್ ಮಾಡಲಾಗಿದೆ, ವಿಧಾನಸಭಾ ಚುನಾವಣಾ ಸಂದರ್ಭದಲ್ಲೇ ಯತೀಂದ್ರರೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿತ್ತು, ಅವರು ತಮ್ಮ ವರುಣ ಕ್ಷೇತ್ರವನ್ನು ಸಿದ್ದರಾಮಯ್ಯನವರಿಗೆ ಬಿಟ್ಟುಕೊಟ್ಟರೆ ಅವರನ್ನು ವಿಧಾನ ಪರಿಷತ್ ಸದಸ್ಯ ಮಾಡುವ ವಾಗ್ದಾನ ಮಾಡಲಾಗಿತ್ತು ಎಂದು ಶಿವಕುಮಾರ್ ಹೇಳಿದರು.

ಬೆಂಗಳೂರು: ದೆಹಲಿಯಿಂದ ಬಂದ ನಂತರ ತಮ್ಮ ನಿವಾಸದಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಮಾತಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar), ವಿಧಾನ ಪರಿಷತ್ ಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ದೆಹಲಿಗೆ ತೆಗೆದುಕೊಂಡು ಹೋಗಿ ಹೈಕಮಾಂಡ್ ಜೊತೆ ಚರ್ಚಿಸಲಾಗಿದೆ ಮತ್ತು ಸುಮಾರು 300 ಆಕಾಂಕ್ಷಿಗಳ ಪಟ್ಟಿಯಿಂದ 65 ಜನರ ಹೆಸರುಗಳನ್ನು ಶಾರ್ಟ್ ಲಿಸ್ಟ್ (Shortlist) ಮಾಡಲಾಗಿದೆ, ನಮ್ಮ ಅಭಿಪ್ರಾಯಗಳನ್ನು ಕೇಳಿದ್ದಾರೆ, ಆದರೆ ಅಂತಿಮ ಹೆಸರುಗಳನ್ನು ಖುದ್ದು ಹೈಕಮಾಂಡ್ (high command) ಘೋಷಿಸಲಿದೆ ಎಂದು ಹೇಳಿದರು. ಯತೀಂದ್ರ ಸಿದ್ದರಾಮಯ್ಯ ಹೆಸರನ್ನು ಯಾವುದೇ ಚರ್ಚೆಯಿಲ್ಲದೆ ಫೈನಲ್ ಮಾಡಲಾಗಿದೆ, ವಿಧಾನಸಭಾ ಚುನಾವಣಾ ಸಂದರ್ಭದಲ್ಲೇ ಯತೀಂದ್ರರೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿತ್ತು, ಅವರು ತಮ್ಮ ವರುಣ ಕ್ಷೇತ್ರವನ್ನು ಸಿದ್ದರಾಮಯ್ಯನವರಿಗೆ ಬಿಟ್ಟುಕೊಟ್ಟರೆ ಅವರನ್ನು ವಿಧಾನ ಪರಿಷತ್ ಸದಸ್ಯ ಮಾಡುವ ವಾಗ್ದಾನ ಮಾಡಲಾಗಿತ್ತು ಎಂದು ಶಿವಕುಮಾರ್ ಹೇಳಿದರು. ಉಳಿದ ಸ್ಥಾನಗಳಿಹಗೆ ಪಕ್ಷದ ಹಿರಿಯ ನಾಯಕರನ್ನು, ತಮ್ಮ ಕ್ಷೇತ್ರಗಳನ್ನು ತ್ಯಾಗ ಮಾಡಿದವರನ್ನು, ಪಕ್ಷಕ್ಕಾಗಿ ದಶಕಗಳಿಂದ ದುಡಿಯುತ್ತ ಬಂದು ವಿಧಾನ ಸಭಾ ಚುನಾವಣೆಯಲ್ಲಿ ಸೋತವರನ್ನು, ಮತ್ತು ಕೆಲವರನ್ನು ಸಮುದಾಯಗಳ ಆಧಾರದ ಮೇಲೆ ಪರಿಗಣಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಇವತ್ತಿನ ಸಭೆಯಲ್ಲಿ ಯತೀಂದ್ರ ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆ ಚರ್ಚೆಯಾಗಿಲ್ಲ: ಡಿಕೆ ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ

Follow us on