ಬಿಗ್ ಬಾಸ್ ಮನೆಯ ಅಸಲಿ ಆಟ ಬಿಚ್ಚಿಟ್ಟ ಪೊಲೀಸ್ ವರಿಷ್ಠಾಧಿಕಾರಿ
ಪರಿಸರ ನಿಯಮ ಉಲ್ಲಂಘನೆ ಆರೋಪದಲ್ಲಿ ಜಾಲಿವುಡ್ ಸ್ಟುಡಿಯೋಸ್‌ಗೆ (Jollywood Studios) ಬೀಗ ಬಿದ್ದಿದೆ. ಬಿಗ್ ಬಾಸ್ (Bigg Boss Kannada 12) ನಡೆಯುತ್ತಿರುವ ಜಾಗಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಬೀಗ ಜಡಿದಿದ್ದಾರೆ. ಇನ್ನು ಬಿಗ್ ಬಾಸ್ ರಿಯಾಲಿಟಿ ಶೋಗೆ ಅನುಮತಿ ಪಡೆಯದ ವಿಚಾರವಾಗಿ ಟಿವಿ9ಗೆ ಬೆಂಗಳೂರು ದಕ್ಷಿಣ ಎಸ್ಪಿ ಶ್ರೀನಿವಾಸಗೌಡ ಪ್ರತಿಕ್ರಿಯಿಸಿದ್ದಾರೆ.
ಪರಿಸರ ನಿಯಮ ಉಲ್ಲಂಘನೆ ಆರೋಪದಲ್ಲಿ ಜಾಲಿವುಡ್ ಸ್ಟುಡಿಯೋಸ್‌ಗೆ (Jollywood Studios) ಬೀಗ ಬಿದ್ದಿದೆ. ಬಿಗ್ ಬಾಸ್ (Bigg Boss Kannada 12) ನಡೆಯುತ್ತಿರುವ ಜಾಗಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಬೀಗ ಜಡಿದಿದ್ದಾರೆ. ಇನ್ನು ಬಿಗ್ ಬಾಸ್ ರಿಯಾಲಿಟಿ ಶೋಗೆ ಅನುಮತಿ ಪಡೆಯದ ವಿಚಾರವಾಗಿ ಟಿವಿ9ಗೆ ಬೆಂಗಳೂರು ದಕ್ಷಿಣ ಎಸ್ಪಿ ಶ್ರೀನಿವಾಸಗೌಡ ಪ್ರತಿಕ್ರಿಯಿಸಿದ್ದು, ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆದು ಶೋ ನಡೆಸಬೇಕು. ಹೊರಗೆ ಶೂಟಿಂಗ್ ವೇಳೆ ಇಲಾಖೆಯಿಂದ NOC ಪಡೆಯಬೇಕು. ಆದರೆ ಒಳಾಂಗಣ ಶೋ ಮಾಡುತ್ತಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಪರವಾನಿಗೆ ಪಡೆದಿಲ್ಲ ಎಂದು ಸ್ಪಷ್ಟಪಡಿಸಿದರು.
ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿದ್ದಾರೆ. ಈ ಬಗ್ಗೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗದಂತೆ ಕ್ರಮ ಕೈಗೊಳ್ಳುತ್ತೇವೆ. ಒಳಾಂಗಣದಲ್ಲಿ ಗೇಮ್ಸ್ ಆಡಿಸುವ ಬಗ್ಗೆ ಎನ್ಒಸಿ ಪಡೆದಿಲ್ಲ. ಏನಾದರೂ ಅವಘಡ ಆದರೆ ಸಂಬಂಧಪಟ್ಟವರ ವಿರುದ್ಧ ಕ್ರಮ ಆಗುತ್ತೆ ಎಂದರು.

