ಹಿಂದೆ ಒಬ್ಬ ಪೊಲೀಸ್ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಾಗ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರೆ? ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯ ಹೇಳಿರುವುದನ್ನು ಮಂಗಳವಾರ ಮಂಗಳೂರಿನಲ್ಲಿದ್ದ ಬೊಮ್ಮಾಯಿ ಅವರ ಗಮನಕ್ಕೆ ತಂದಾಗ ವ್ಯಂಗ್ಯವಾಗಿ ನಕ್ಕು ಹಿಂದೆ ಒಬ್ಬ ಪೊಲೀಸ್ ಅಧಿಕಾರಿ (ಎಂ ಕೆ ಗಣಪತಿ) ಆತ್ಮಹತ್ಯೆ ಮಾಡಿಕೊಂಡಾಗ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಿದ್ದರೆ ಅಂತ ಕೇಳಿದರು.
ಮಂಗಳೂರು: ಬಿಜೆಪಿ ಕಾರ್ಯಕರ್ತ ಮತ್ತು ಗುತ್ತಿಗೆದಾರನೂ ಆಗಿದ್ದ ಸಂತೋಷ ಪಾಟೀಲ (Santosh Patil) ಅಸಹಜ ಸಾವು ರಾಜ್ಯ ರಾಜಕೀಯ ವಲಯದಲ್ಲಿ ತಲ್ಲಣ ಮೂಡಸಿದೆ. ತಾವು ನಡೆಸಿದ ಕಾಮಗಾರಿಗಳ ಬಿಲ್ ಗಳನ್ನು ಕ್ಲೀಯರ್ ಮಾಡಲು ಸಚಿವ ಕೆ ಎಸ್ ಈಶ್ವರಪ್ಪನವರು (KS Eshwarappa) ಶೇ. 40 ರಷ್ಟು ಕಮೀಷನ್ ಕೇಳಿದ್ದರು ಅಂತ ದೂರಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದ ಸಂತೋಷ ಅವರ ದೇಹ ನೇತಾಡುತ್ತಿದ್ದ ಉಡುಪಿಯ ಶಾಂಭವಿ ಲಾಡ್ಚ್ ನ ರೂಮೊಂದರಲ್ಲಿ ಮೃತರು ಬರೆದಿದ್ದು ಎನ್ನಲಾಗಿರುವ ಡೆತ್ ನೋಟ್ (death note) ನಲ್ಲೂ ಸಚಿವರ ಹೆಸರು ಪ್ರಸ್ತಾಪವಾಗಿದೆ. ಇನ್ ಫ್ಯಾಕ್ಟ್ ಈಶ್ವರಪ್ಪನವರೇ ನನ್ನ ಸಾವಿಗೆ ಕಾರಣ ಎಂದು ಅದರಲ್ಲಿ ಬರೆಯಲಾಗಿದೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಈ ಘಟನೆ ಹಿನ್ನೆಲೆಯಲ್ಲಿ ಈಶ್ವರಪ್ಪ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.
ಸಿದ್ದರಾಮಯ್ಯ ಹೇಳಿರುವುದನ್ನು ಮಂಗಳವಾರ ಮಂಗಳೂರಿನಲ್ಲಿದ್ದ ಬೊಮ್ಮಾಯಿ ಅವರ ಗಮನಕ್ಕೆ ತಂದಾಗ ವ್ಯಂಗ್ಯವಾಗಿ ನಕ್ಕು ಹಿಂದೆ ಒಬ್ಬ ಪೊಲೀಸ್ ಅಧಿಕಾರಿ (ಎಂ ಕೆ ಗಣಪತಿ) ಆತ್ಮಹತ್ಯೆ ಮಾಡಿಕೊಂಡಾಗ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಿದ್ದರೆ ಅಂತ ಕೇಳಿದರು.
ನಿಷ್ಪಕ್ಷಪಾತ, ಪ್ರಾಮಾಣಿಕ ಮತ್ತು ಪಾರದರ್ಶಕ ತನಿಖೆ ನಡೆಸುವಂತೆ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ. ತನಿಖೆಯಲ್ಲಿ ಲೋಪದೋಷಗಳಿರಬಾರದು ಸ್ಪಷ್ಟವಾಗಿ ಪೊಲೀಸರಿಗೆ ತಿಳಿಸಿದ್ದೇನೆ. ತನಿಖೆ ಮೂಲಕ ಹೊರಬರುವ ಸತ್ಯಾಂಶದ ಮೇರೆಗೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.