ಬಾಣಸವಾಡಿ ಖಾಸಗಿ ಶಾಲೆಯ ವಿದ್ಯಾರ್ಥಿನಿ ಟೀಚರ್ ಬೈದಿದಕ್ಕೆ ಆತ್ಮಹತ್ಯೆ ಮಾಡಿಕೊಂಡಳೇ? ಮುಖ್ಯಶಿಕ್ಷಕಿ ಹೇಳೋದೇನು?

ಬಾಣಸವಾಡಿ ಖಾಸಗಿ ಶಾಲೆಯ ವಿದ್ಯಾರ್ಥಿನಿ ಟೀಚರ್ ಬೈದಿದಕ್ಕೆ ಆತ್ಮಹತ್ಯೆ ಮಾಡಿಕೊಂಡಳೇ? ಮುಖ್ಯಶಿಕ್ಷಕಿ ಹೇಳೋದೇನು?

TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Nov 14, 2022 | 2:55 PM

ಬೆಂಗಳೂರಿನ ಖಾಸಗಿ ಶಾಲೆಯೊಂದರ ವಿದ್ಯಾರ್ಥಿನಿಯಾಗಿದ್ದ ಅಮೃತಾ ಹೆಸರಿನ ಬಾಲಕಿ ರವಿವಾರ ಸಾಯಂಕಾಲ ತನ್ನ ಮನೆಯಲ್ಲಿ ಸುಮಾರು 5 ಗಂಟೆಗೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ,

ಬೆಂಗಳೂರು: ಹತ್ತನೇ ತರಗತಿಯಲ್ಲಿ ಓದುತ್ತಿದ್ದ ಒಬ್ಬ ವಿದ್ಯಾರ್ಥಿನಿ (student) ತನ್ನ ಟೀಚರೊಬ್ಬರು ಬೈದರೆನ್ನುವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ ಬಾಣಸವಾಡಿಯಲ್ಲಿ (Banaswadi) ನಡೆದಿದೆ. ಏರಿಯಾದ ಪಿಳ್ಳಾರೆಡ್ಡಿ ನಗರದಲ್ಲಿರುವ ಖಾಸಗಿ ಶಾಲೆಯೊಂದರ ವಿದ್ಯಾರ್ಥಿನಿಯಾಗಿದ್ದ ಅಮೃತಾ (Amrutha) ಹೆಸರಿನ ಬಾಲಕಿ ರವಿವಾರ ಸಾಯಂಕಾಲ ತನ್ನ ಮನೆಯಲ್ಲಿ ಸುಮಾರು 5 ಗಂಟೆಗೆ ಆತ್ಮಹತ್ಯೆ ಮಾಡಿಕೊಂಡಿದ್ದು, ಶಾಲೆಯ ಮುಖ್ಯ ಶಿಕ್ಷಕಿಯೊಂದಿಗೆ ಟಿವಿ9 ಕನ್ನಡ ವಾಹಿನಿಯ ಬೆಂಗಳೂರು ವರದಿಗಾರ ಮಾತಾಡಿದ್ದಾರೆ. ಮುಖ್ಯ ಶಿಕ್ಷಕಿ ತಮ್ಮ ಶಾಲೆ ಮತ್ತು ಶಿಕ್ಷಕಿಯನ್ನು ಸಮರ್ಥಿಸಿಕೊಳ್ಳುತ್ತಿರುವುದನ್ನು ವಿಡಿಯೋದಲ್ಲಿ ಕೇಳಿಸಿಕೊಳ್ಳಬಹುದು.