Loading video

ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ

|

Updated on: Sep 16, 2024 | 9:20 PM

ಆಂಧ್ರದ ಕಡಪ ಜಿಲ್ಲೆಯಲ್ಲಿ ಭಾರೀ ಅನಾಹುತ ತಪ್ಪಿದೆ. ಇಲ್ಲಿನ ಮಾಧವರಂ-1 ಗ್ಯಾಸ್ ಗೋದಾಮಿನಲ್ಲಿ ಡೀಸೆಲ್ ಟ್ಯಾಂಕರ್ ಲಾರಿಗೆ ಹಠಾತ್ ಬೆಂಕಿ ಕಾಣಿಸಿಕೊಂಡಿದೆ. ಪವಾಡಸದೃಶವಾಗಿ ಲಾರಿ ಚಾಲಕ ಹಾಗೂ ಕ್ಲೀನರ್ ಸುರಕ್ಷಿತವಾಗಿ ಪಾರಾಗಿದ್ದಾರೆ.

ಹೈದರಾಬಾದ್: ಕಡಪ ಜಿಲ್ಲೆಯಲ್ಲಿ ಭಾರೀ ಅನಾಹುತವೊಂದು ತಪ್ಪಿದೆ. ಜಿಲ್ಲೆಯ ಮಾಧವರಂ-1 ಗ್ಯಾಸ್ ಗೋದಾಮಿನಲ್ಲಿ ಡೀಸೆಲ್ ಲಾರಿಗೆ ಹಠಾತ್ ಬೆಂಕಿ ಕಾಣಿಸಿಕೊಂಡಿದೆ. ಲಾರಿ ಚಾಲಕ ಹಾಗೂ ಕ್ಲೀನರ್ ಸುರಕ್ಷಿತವಾಗಿ ಪಾರಾಗಿದ್ದಾರೆ. ಮಾಹಿತಿ ಪಡೆದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಲಾರಿ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಇದರಿಂದ ರಾಷ್ಟ್ರೀಯ ಹೆದ್ದಾರಿಯ ಎರಡೂ ಬದಿ ವಾಹನ ಸಂಚಾರ ಸ್ಥಗಿತಗೊಂಡಿತ್ತು.

ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ