ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ -ದಿಗ್ವಿಜಯ್ ಸಿಂಗ್ ದಂಪತಿ ಸಮಾಗಮ
ಸಿದ್ದರಾಮಯ್ಯ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರು ತಮ್ಮ ಪತ್ನಿ ಅಮೃತಾ ರೈ ಅವರ ಸಮೇತ ಇಂದು ಶುಕ್ರವಾರ ಬೆಂಗಳೂರಿನಲ್ಲಿ ಭೇಟಿಯಾದರು.
ಬೆಂಗಳೂರು, ಜುಲೈ 28: ಸಿದ್ದರಾಮಯ್ಯ (Siddaramaiah) ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಕಾಂಗ್ರೆಸ್ (Congress) ಹಿಡಿಯ ನಾಯಕ ದಿಗ್ವಿಜಯ್ ಸಿಂಗ್ (Digvijay Singh) ಅವರು ತಮ್ಮ ಪತ್ನಿ ಸಮೇತ ಇಂದು ಶುಕ್ರವಾರ ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾದರು.
ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ದಂಪತಿ (Couple) ಸೌಹಾರ್ದಯುತವಾಗಿ ಭೇಟಿಯಾಗಿ, ಸಿಎಂ ಸಿದ್ದರಾಮಯ್ಯ ಜೊತೆ ಮಾತುಕತೆ ನಡೆಸಿದರು. ದಿಗ್ವಿಜಯ್ ಸಿಂಗ್ ಭೇಟಿ ವೇಳೆ ಸಿಎಂ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ಡಾ. ಕೆ. ಗೋವಿಂದರಾಜು, ಬೆಳಗಾವಿ ಜಿಲ್ಲೆ ಅಥಣಿ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಅವರುಗಳು ಉಪಸ್ಥಿತರಿದ್ದರು.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Jul 28, 2023 03:20 PM
Latest Videos