ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು

Updated on: May 13, 2026 | 10:31 AM

ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ನಿವಾಸದಲ್ಲಿ ದಿಲೀಪ್ ರಾಜ್ ಅವರ ಪಾರ್ಥೀವ ಶರೀರವನ್ನು ಇರಿಸಲಾಗಿದೆ. ಕಿರುತೆರೆ ಮತ್ತು ಚಿತ್ರರಂಗದ ಅನೇಕರು ಬಂದು ಅಂತಿಮ ದರ್ಶನ ಪಡೆಯುತ್ತಿದ್ದಾರೆ. 47ನೇ ವಯಸ್ಸಿಗೆ ದಿಲೀಪ್ ರಾಜ್ ಅವರು ಹೃದಯಾಘಾತದಿಂದ ನಿಧನರಾಗಿರುವುದನ್ನು ನಂಬಲು ಸಾಧ್ಯವಾಗುತ್ತಿಲ್ಲ. ಆಪ್ತರು, ಕುಟುಂಬದವರು, ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

ಕನ್ನಡ ಚಿತ್ರರಂಗದ ಖ್ಯಾತ ನಟ ದಿಲೀಪ್ ರಾಜ್ (Dileep Raj) ಅವರು ಅಕಾಲಿಕವಾಗಿ ನಿಧನರಾಗಿರುವುದು ನೋವಿನ ಸಂಗತಿ. ಹೃದಯಾಘಾತದಿಂದ ಅವರು ಕೊನೆಯುಸಿರು ಎಳೆದಿದ್ದಾರೆ. ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ನಟಿಸಿ ಮನೆಮಾತಾಗಿದ್ದ ದಿಲೀಪ್ ರಾಜ್ ಅವರು ಎಲ್ಲರ ಜೊತೆ ಉತ್ತಮ ಒಡನಾಟ ಹೊಂದಿದ್ದರು. ಅವರ ನಿಧನಕ್ಕೆ ಎಲ್ಲರೂ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ. ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ನಿವಾಸದಲ್ಲಿ ದಿಲೀಪ್ ರಾಜ್ ಅವರ ಪಾರ್ಥೀವ ಶರೀರವನ್ನು ಇರಿಸಲಾಗಿದೆ. ಕಿರುತೆರೆ ಮತ್ತು ಚಿತ್ರರಂಗದ ಅನೇಕರು ಬಂದು ಅಂತಿಮ ದರ್ಶನ ಪಡೆಯುತ್ತಿದ್ದಾರೆ. 47ನೇ ವಯಸ್ಸಿಗೆ ದಿಲೀಪ್ ರಾಜ್ ಅವರು ಹೃದಯಾಘಾತದಿಂದ (Heart Attack) ನಿಧನರಾಗಿರುವುದನ್ನು ನಂಬಲು ಸಾಧ್ಯವಾಗುತ್ತಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More