AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನಲ್ಲಿರುವ ದರ್ಶನ್​ ನೋಡಲು ಅತ್ತಿಗೆ ಜೊತೆ ಬಂದ ದಿನಕರ್ ತೂಗುದೀಪ

ಜೈಲಿನಲ್ಲಿರುವ ದರ್ಶನ್​ ನೋಡಲು ಅತ್ತಿಗೆ ಜೊತೆ ಬಂದ ದಿನಕರ್ ತೂಗುದೀಪ

ಮದನ್​ ಕುಮಾರ್​
|

Updated on: Jul 15, 2024 | 9:46 PM

Share

ನಟ ದರ್ಶನ್​ ಅವರ ತಮ್ಮ ದಿನಕರ್ ತೂಗುದೀಪ, ಪತ್ನಿ ವಿಜಯಲಕ್ಷ್ಮಿ ಅವರು ಇಂದು (ಜು.15) ಪರಪ್ಪನ ಅಗ್ರಹಾರ ಜೈಲಿಗೆ ಬಂದಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ. ದರ್ಶನ್​ಗೆ ಜಾಮೀನು ಕೊಡಿಸುವ ಬಗ್ಗೆ ಕುಟುಂಬದವರು ಮಾತುಕತೆ ನಡೆಸುತ್ತಿದ್ದಾರೆ. ಎ2 ಆಗಿರುವ ಪವಿತ್ರಾ ಗೌಡ ಅವರ ತಾಯಿ ಹಾಗೂ ಸಹೋದರ ಕೂಡ ಇಂದು ಕಾರಾಗೃಹಕ್ಕೆ ಭೇಟಿ ನೀಡಿದ್ದಾರೆ.

ನ್ಯಾಯಾಂಗ ಬಂಧನದಲ್ಲಿ ಇರುವ ನಟ ದರ್ಶನ್​ ಅವರ ಪರವಾಗಿ ಕುಟುಂಬದವರು ಕಾನೂನಿನ ಹೋರಾಟ ನಡೆಸುತ್ತಿದ್ದಾರೆ. ರೇಣುಕಾ ಸ್ವಾಮಿ ಮರ್ಡರ್​ ಕೇಸ್​ನಲ್ಲಿ ಪ್ರಮುಖ ಆರೋಪಿ ಆಗಿರುವ ದರ್ಶನ್​ ಪರಪ್ಪನ ಅಗ್ರಹಾರದಲ್ಲಿ ಕಾಲ ಕಳೆಯುತ್ತಿದ್ದಾರೆ. ಆರಂಭದಲ್ಲಿ ಅವರು ಅರೆಸ್ಟ್​ ಆದಾಗ ಕುಟುಂಬದವರು ಕೂಡಲೇ ಬಂದಿರಲಿಲ್ಲ. ನಂತರ ಪತ್ನಿ ವಿಜಯಲಕ್ಷ್ಮಿ, ತಮ್ಮ ದಿನಕರ್​ ತೂಗುದೀಪ, ತಾಯಿ ಮೀನಾ ಮುಂತಾದವರು ಬಂದು ದರ್ಶನ್​ಗೆ ಧೈರ್ಯ ತುಂಬಿದರು. ಆರೋಪಿಯ ಭೇಟಿ ಮಾಡಲು ಕುಟುಂಬದವರಿಗೆ ಹಾಗೂ ಆಪ್ತರಿಗೆ ಮಾತ್ರ ಅವಕಾಶ ನೀಡಲಾಗಿದೆ. ಇಂದು (ಜುಲೈ 15) ದಿನಕರ್​ ತೂಗುದೀಪ ಹಾಗೂ ವಿಜಯಲಕ್ಷ್ಮಿ ಅವರು ಪರಪ್ಪನ ಅಗ್ರಹಾರಕ್ಕೆ ಬಂದು ದರ್ಶನ್​ ಅವರನ್ನು ಭೇಟಿ ಮಾಡಿದ್ದಾರೆ. ಆದಷ್ಟು ಬೇಗ ಅವರಿಗೆ ಜಾಮೀನು ಸಿಗಲಿ ಎಂದು ಫ್ಯಾನ್ಸ್​ ಬಯಸುತ್ತಿದ್ದಾರೆ. ಪವಿತ್ರಾ ಗೌಡ ಹಾಗೂ ಅವರ ಸಹಚರರು ಕೂಡ ಜೈಲಿನಲ್ಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More