ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಶಾಸಕರ ಬೆಂಬಲಿಗರಿಂದ ಕೆಪಿಸಿಸಿ ಕಚೇರಿ ಬಳಿ ಪ್ರತಿಭಟನೆ

Edited By:

Updated on: Aug 04, 2026 | 3:01 PM

ಸಚಿವ ಸಂಪುಟ ವಿಸ್ತರಣೆಯಲ್ಲಿ ದಿನೇಶ್ ಗುಂಡೂರಾವ್ ಅವರಿಗೆ ಸಚಿವ ಸ್ಥಾನ ಕೈತಪ್ಪಿದ್ದರಿಂದ, ಅವರ ಬೆಂಬಲಿಗರು ಕೆಪಿಸಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಬ್ರಾಹ್ಮಣ ಸಮುದಾಯಕ್ಕೆ ಅನ್ಯಾಯವಾಗಿದೆ, ದಿನೇಶ್ ಗುಂಡೂರಾವ್ ಅವರಿಗೆ ಸ್ಥಾನ ನೀಡಬೇಕೆಂದು ಆಗ್ರಹಿಸಿದರು. ಹಿರಿಯ ನಾಯಕರು ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮತ್ತು ಕೆ.ಸಿ. ವೇಣುಗೋಪಾಲ್ ಅವರ ಗಮನಕ್ಕೆ ತರುವುದಾಗಿ ಭರವಸೆ ನೀಡಿದರು.

ಬೆಂಗಳೂರು, ಆಗಸ್ಟ್​ 04: ದಿನೇಶ್ ಗುಂಡೂರಾವ್​ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಕೆಪಿಸಿಸಿ ಕಚೇರಿ ಸಭಾಂಗಣದಲ್ಲಿ ಅವರ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಎದುರೇ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದು, ಡಿ.ಕೆ.ಶಿವಕುಮಾರ್ ಸಂಪುಟದಲ್ಲಿ ಬ್ರಾಹ್ಮಣ ಸಮುದಾಯ ಕಡೆಗಣನೆ ಮಾಡಲಾಗಿದೆ. ಹೀಗಾಗಿ ಖಾಲಿಯಿರುವ ಒಂದು ಸ್ಥಾನವನ್ನು ದಿನೇಶ್​ಗೆ ನೀಡುವಂತೆ ಒತ್ತಡ ಹೇರುವಂತೆ ಆಗ್ರಹಿಸಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್​ಗೆ ಮನವಿಪತ್ರ ಸಲ್ಲಿಸಿದ್ದಾರೆ. ಮನವಿ ಸ್ವೀಕರಿಸಿದ ಹರಿಪ್ರಸಾದ್​​ ಆಗ್ರಹವನ್ನು ಹೈಕಮಾಂಡ್​ಗೆ ತಿಳಿಸುವ ಭರವಸೆ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Published on: Aug 04, 2026 03:01 PM
Loading...
Unable to load recommendations.
Follow Us