ವಯಸ್ಸು ಕೇವಲ ಒಂದು ಸಂಖ್ಯೆ... 39ನೇ ವಯಸ್ಸಿನಲ್ಲೂ ದಿನೇಶ್ ಕಾರ್ತಿಕ್ ಅದ್ಭುತ ಕ್ಯಾಚ್

ವಯಸ್ಸು ಕೇವಲ ಒಂದು ಸಂಖ್ಯೆ… 39ನೇ ವಯಸ್ಸಿನಲ್ಲೂ ದಿನೇಶ್ ಕಾರ್ತಿಕ್ ಅದ್ಭುತ ಕ್ಯಾಚ್

ಝಾಹಿರ್ ಯೂಸುಫ್
|

Updated on: Jan 16, 2025 | 11:30 AM

Paarl Royals vs MI Cape Town: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಎಂಐ ಕೇಪ್​ಟೌನ್ ತಮಡವು 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 158 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಪಾರ್ಲ್ ರಾಯಲ್ಸ್ ತಂಡವು 19 ಓವರ್​​ಗಳಲ್ಲಿ 4 ವಿಕೆಟ್ ಕಳೆದುಕೊಂಡು 159 ರನ್ ಬಾರಿಸಿ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಟೀಮ್ ಇಂಡಿಯಾದ ಮಾಜಿ ಆಟಗಾರ ದಿನೇಶ್ ಕಾರ್ತಿಕ್ ಸೌತ್ ಆಫ್ರಿಕಾ ಟಿ20 ಲೀಗ್ ಆಡುತ್ತಿರುವುದು ಗೊತ್ತೇ ಇದೆ. ಪಾರ್ಲ್ ರಾಯಲ್ಸ್ ಪರ ಕಣಕ್ಕಿಳಿಯುತ್ತಿರುವ ಡಿಕೆ ಇದೀಗ ಅದ್ಭುತ ವಿಕೆಟ್ ಕೀಪಿಂಗ್ ಮೂಲಕ ಗಮನ ಸೆಳೆದಿದ್ದಾರೆ. ಸೌತ್ ಆಫ್ರಿಕಾ ಟಿ20 ಲೀಗ್​ನ 9ನೇ ಪಂದ್ಯದಲ್ಲಿ ಪಾರ್ಲ್ ರಾಯಲ್ಸ್ ಮತ್ತು ಎಂಐ ಕೇಪ್​ಟೌನ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ರಾಯಲ್ಸ್ ತಂಡದ ನಾಯಕ ಡೇವಿಡ್ ಮಿಲ್ಲರ್, ಎಂಐ ಕೇಪ್​ಟೌನ್ ತಂಡವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿದರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಎಂಐ ಕೇಪ್​ಟೌನ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಹೀಗೆ ಉತ್ತಮ ಆರಂಭ ಪಡೆಯದಿರಲು ಮುಖ್ಯ ಕಾರಣ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್. ದಯಾನ್ ಗಲಿಯಂ ಎಸೆದ 5ನೇ ಓವರ್​ನ ಮೊದಲ ಎಸೆತವು ಅಝ್ಮತುಲ್ಲಾ ಒಮರ್​ಝಾಹಿ ಅವರ ಬ್ಯಾಟ್ ಸವರಿ ಫಸ್ಟ್ ಸ್ಲಿಪ್​ನತ್ತ ಸಾಗಿತ್ತು. ಕ್ಷಣಾರ್ಧದಲ್ಲೇ ಡೈವ್ ಹೊಡೆಯುವ ಮೂಲಕ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಚೆಂಡನ್ನು ಹಿಡಿದರು. ಇದರೊಂದಿಗೆ ಎಂಐ ಕೇಪ್​ಟೌನ್ ತಂಡದ ಮೊದಲ ವಿಕೆಟ್ ಪತನವಾಯಿತು.

ಇದೀಗ 39ನೇ ವಯಸ್ಸಿನಲ್ಲೇ ಅತ್ಯುತ್ತಮ ವಿಕೆಟ್ ಕೀಪಿಂಗ್ ಪ್ರದರ್ಶನ ನೀಡಿರುವ ದಿನೇಶ್ ಕಾರ್ತಿಕ್ ಅವರ ವಿಡಿಯೋ ವೈರಲ್ ಆಗಿದ್ದು, ಅಭಿಮಾನಿಗಳಿಂದ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಎಂಐ ಕೇಪ್​ಟೌನ್ ತಮಡವು 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 158 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಪಾರ್ಲ್ ರಾಯಲ್ಸ್ ತಂಡವು 19 ಓವರ್​​ಗಳಲ್ಲಿ 4 ವಿಕೆಟ್ ಕಳೆದುಕೊಂಡು 159 ರನ್ ಬಾರಿಸಿ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.