ಸಚಿವ ಸತೀಶ್ ಜಾರಕಿಹೊಳಿ ಮನೆಯಲ್ಲಿ ಡಿನ್ನರ್ ಮೀಟಿಂಗ್: ಸಿಎಂ ಸೇರಿ ಹಲವರು ಭಾಗಿ
ಸಚಿವ ಸತೀಶ್ ಜಾರಕಿಹೊಳಿ ಅವರು ಆಯೋಜಿಸಿದ್ದ ಔತಣಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ. ಜಿ. ಪರಮೇಶ್ವರ್, ಕೆ.ಎನ್. ರಾಜಣ್ಣ ಮತ್ತು ಹೆಚ್.ಸಿ. ಮಹದೇವಪ್ಪ ಸೇರಿದಂತೆ ಹಲವು ಪ್ರಮುಖ ವ್ಯಕ್ತಿಗಳು ಭಾಗವಹಿಸಿದ್ದರು. ಬೆಂಗಳೂರಿನಲ್ಲಿರುವ ಜಾರಕಿಹೊಳಿ ಅವರ ಸರ್ಕಾರಿ ನಿವಾಸದಲ್ಲಿ ಈ ಔತಣಕೂಟ ನಡೆದಿದ್ದು, ರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಮೂಡಿಸಿದೆ.
ಬೆಂಗಳೂರು, ಜನವರಿ 02: ಬೆಂಗಳೂರಿನಲ್ಲಿರುವ ಸರ್ಕಾರಿ ನಿವಾಸದಲ್ಲಿ ಇಂದು ಸಚಿವ ಸತೀಶ್ ಜಾರಕಿಹೊಳಿ ಸಿಎಂ ಸಿದ್ದರಾಮಯ್ಯ (Siddaramaiah) ಮತ್ತು ಗೃಹಸಚಿವರು ಸೇರಿ ಪ್ರಮುಖರಿಗೆ ಔತಣಕೂಟ ಏರ್ಪಡಿಸಿದ್ದರು. ಔತಣಕೂಟ ಹಿನ್ನಲೆ ನಗರದ ಕ್ರೆಸೆಂಟ್ ರಸ್ತೆಯಲ್ಲಿರುವ ಸಚಿವ ಸತೀಶ್ ಸರ್ಕಾರಿ ನಿವಾಸಕ್ಕೆ ಸಿಎಂ, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಕೆ.ಎನ್.ರಾಜಣ್ಣ, ಹೆಚ್.ಸಿ.ಮಹದೇವಪ್ಪ ಆಗಮಿಸಿದ್ದಾರೆ. ಸದ್ಯ ಡಿನ್ನರ್ ಮೀಟಿಂಗ್ ಭಾರಿ ಕುತೂಹಲ ಮೂಡಿಸಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos