ಸಚಿವ ಸತೀಶ್ ಜಾರಕಿಹೊಳಿ ಮನೆಯಲ್ಲಿ ಡಿನ್ನರ್ ಮೀಟಿಂಗ್: ಸಿಎಂ ಸೇರಿ ಹಲವರು ಭಾಗಿ

Edited By:

Updated on: Jan 02, 2025 | 11:07 PM

ಸಚಿವ ಸತೀಶ್ ಜಾರಕಿಹೊಳಿ ಅವರು ಆಯೋಜಿಸಿದ್ದ ಔತಣಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ. ಜಿ. ಪರಮೇಶ್ವರ್, ಕೆ.ಎನ್. ರಾಜಣ್ಣ ಮತ್ತು ಹೆಚ್.ಸಿ. ಮಹದೇವಪ್ಪ ಸೇರಿದಂತೆ ಹಲವು ಪ್ರಮುಖ ವ್ಯಕ್ತಿಗಳು ಭಾಗವಹಿಸಿದ್ದರು. ಬೆಂಗಳೂರಿನಲ್ಲಿರುವ ಜಾರಕಿಹೊಳಿ ಅವರ ಸರ್ಕಾರಿ ನಿವಾಸದಲ್ಲಿ ಈ ಔತಣಕೂಟ ನಡೆದಿದ್ದು, ರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಮೂಡಿಸಿದೆ.

ಬೆಂಗಳೂರು, ಜನವರಿ 02: ಬೆಂಗಳೂರಿನಲ್ಲಿರುವ ಸರ್ಕಾರಿ ನಿವಾಸದಲ್ಲಿ ಇಂದು ಸಚಿವ ಸತೀಶ್ ಜಾರಕಿಹೊಳಿ ಸಿಎಂ ಸಿದ್ದರಾಮಯ್ಯ (Siddaramaiah) ಮತ್ತು ಗೃಹಸಚಿವರು ಸೇರಿ ಪ್ರಮುಖರಿಗೆ ಔತಣಕೂಟ ಏರ್ಪಡಿಸಿದ್ದರು. ಔತಣಕೂಟ ಹಿನ್ನಲೆ ನಗರದ ಕ್ರೆಸೆಂಟ್ ರಸ್ತೆಯಲ್ಲಿರುವ ಸಚಿವ ಸತೀಶ್ ಸರ್ಕಾರಿ ನಿವಾಸಕ್ಕೆ ಸಿಎಂ, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಕೆ.ಎನ್.ರಾಜಣ್ಣ, ಹೆಚ್‌.ಸಿ.ಮಹದೇವಪ್ಪ ಆಗಮಿಸಿದ್ದಾರೆ. ಸದ್ಯ ಡಿನ್ನರ್ ಮೀಟಿಂಗ್​ ಭಾರಿ ಕುತೂಹಲ ಮೂಡಿಸಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. 

Follow Us
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More