‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಭಾವುಕ ಸರ್ಪ್ರೈಸ್
ನಾಗಶೇಖರ್ ನಿರ್ದೇಶನ ಮಾಡಿರುವ ‘ಸಂಜು ವೆಡ್ಸ್ ಗೀತಾ 2’ ಸಿನಿಮಾ ಬಿಡುಗಡೆ ಆಗಿದೆ. ಮೊದಲ ದಿನ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಈ ಬಗ್ಗೆ ನಿರ್ದೇಶಕ ನಾಗಶೇಖರ್ ಅವರು ಮಾತನಾಡಿದ್ದಾರೆ. ಈ ಸಿನಿಮಾದಲ್ಲಿ ಹಣಕ್ಕಿಂತ ಪ್ರೀತಿಯೇ ಮುಖ್ಯ ಎಂಬ ಸಂದೇಶ ಇದೆ.
ನಾಗಶೇಖರ್ ನಿರ್ದೇಶನ ಮಾಡಿರುವ ‘ಸಂಜು ವೆಡ್ಸ್ ಗೀತಾ 2’ (Sanju Weds Geetha 2) ಸಿನಿಮಾ ಬಿಡುಗಡೆ ಆಗಿದೆ. ಮೊದಲ ದಿನ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಈ ಬಗ್ಗೆ ನಿರ್ದೇಶಕ ನಾಗಶೇಖರ್ ಅವರು ಮಾತನಾಡಿದ್ದಾರೆ. ಈ ಸಿನಿಮಾದಲ್ಲಿ ಹಣಕ್ಕಿಂತ ಪ್ರೀತಿಯೇ ಮುಖ್ಯ ಎಂಬ ಸಂದೇಶ ಇದೆ. ಸಿನಿಮಾದ ಹಲವು ಅಂಶಗಳ ಕುರಿತು ನಾಗಶೇಖರ್ ಅವರು ಟಿವಿ9 ಜೊತೆ ಹಂಚಿಕೊಂಡಿದ್ದಾರೆ. ಪುನೀತ್ ರಾಜ್ಕುಮಾರ್ (Puneeth Rajkumar) ಅವರ ಅಭಿಮಾನಿಗಳಿಗೆ ಈ ಚಿತ್ರದಲ್ಲಿ ಒಂದು ಸರ್ಪೈಸ್ ಇದೆ. ಅದನ್ನು ಸಿನಿಮಾದಲ್ಲೇ ನೋಡಿ ತಿಳಿಯಬೇಕು. ‘ನನ್ನನ್ನು ಮೊದಲ ಬಾರಿ ವಿಮಾನ ಹತ್ತಿಸಿದ್ದೇ ಅಪ್ಪು ಸರ್. ಇಂದಿಗೂ ಅವರೇ ನನ್ನ ಪಾಲಿನ ಬಾಸ್’ ಎಂದು ನಾಗಶೇಖರ್ (Director Nagashekar) ಹೇಳಿದ್ದಾರೆ. ‘ಸಂಜು ವೆಡ್ಸ್ ಗೀತಾ 2’ ಚಿತ್ರದಲ್ಲಿ ರಚಿತಾ ರಾಮ್ ಮತ್ತು ಶ್ರೀನಗರ ಕಿಟ್ಟಿ ಅವರು ನಟಿಸಿದ್ದಾರೆ. ‘ಸಂಜು ವೆಡ್ಸ್ ಗೀತಾ 3’ ಮಾಡುವ ಪ್ಲ್ಯಾನ್ ಕೂಡ ನಾಗಶೇಖರ್ ಅವರಿಗೆ ಇದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.