ಎಲ್ಲರ ಎದುರು ಪ್ರಿಯಾಂಕಾ ಉಪೇಂದ್ರಗೆ ಕ್ಷಮೆ ಕೇಳಿದ ನಿರ್ದೇಶಕ ಪುರುಷೋತ್ತಮ್

Updated on: Nov 18, 2026 | 10:01 PM

‘ಆಯುಷ್’ ಸಿನಿಮಾಗೆ ಸಂಬಂಧಿಸಿದಂತೆ ಕಳೆದ ಕೆಲವು ದಿನಗಳಿಂದ ವಿವಾದ ಸೃಷ್ಟಿ ಆಗಿತ್ತು. ಪ್ರಿಯಾಂಕಾ ಉಪೇಂದ್ರ ಮತ್ತು ನಿರ್ದೇಶಕ ಪುರುಷೋತ್ತಮ್ ನಡುವೆ ಮನಸ್ತಾಪ ಉಂಟಾಗಿತ್ತು. ಈ ವಿವಾದವು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮೆಟ್ಟಿಲು ಏರಿತ್ತು. ಅಲ್ಲಿಯೇ ಈಗ ರಾಜಿ, ಸಂಧಾನ ಮಾಡಲಾಗಿದೆ.

‘ಆಯುಷ್’ ಸಿನಿಮಾಗೆ ಸಂಬಂಧಿಸಿದಂತೆ ಕಳೆದ ಕೆಲವು ದಿನಗಳಿಂದ ವಿವಾದ ಸೃಷ್ಟಿ ಆಗಿತ್ತು. ಪ್ರಿಯಾಂಕಾ ಉಪೇಂದ್ರ ಮತ್ತು ನಿರ್ದೇಶಕ ಪುರುಷೋತ್ತಮ್ ನಡುವೆ ಮನಸ್ತಾಪ ಉಂಟಾಗಿತ್ತು. ಈ ವಿವಾದವು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮೆಟ್ಟಿಲು ಏರಿತ್ತು. ಅಲ್ಲಿಯೇ ರಾಜಿ, ಸಂಧಾನ ಮಾಡಲಾಗಿದೆ. ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ನಿರ್ದೇಶಕ ಪುರುಷೋತ್ತಮ್ ಅವರು ಪ್ರಿಯಾಂಕಾ ಉಪೇಂದ್ರ ಅವರ ಕ್ಷಮೆಯನ್ನು ಕೇಳಿದರು. ‘ನನ್ನಿಂದ ಪ್ರಿಯಾಂಕಾ ಮೇಡಂ ಅವರಿಗೆ ನೋವಾಗಿದ್ದರೆ ನಾನು ಕ್ಷಮೆ ಕೇಳುತ್ತೇನೆ’ ಎಂದು ಪುರುಷೋತ್ತಮ್ ಹೇಳಿದ್ದಾರೆ. ತಮ್ಮಲ್ಲೇ ವಿವಾದ ಬಗೆಹರಿಸಿಕೊಳ್ಳುವ ಬದಲು ಸಾರ್ವಜನಿಕವಾಗಿ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದಕ್ಕಾಗಿಯೂ ಪುರುಷೋತ್ತಮ್ ಕ್ಷಮೆ ಕೇಳಿದ್ದಾರೆ ಎಂದು ಜಯಮಾಲಾ ಅವರು ಮಾಹಿತಿ ನೀಡಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More