ಜಾತಿ ಗಣತಿ ವರದಿ ಮೇಲಿನ ಚರ್ಚೆ ಅಪೂರ್ಣ, ಮುಂದಿನ ಸಭೆಯಲ್ಲಿ ತೀರ್ಮಾನ: ಕೆಎನ್ ರಾಜಣ್ಣ

ಅರುಣ್​ ಕುಮಾರ್​ ಬೆಳ್ಳಿ

Updated on: Apr 18, 2025 | 10:23 AM

ವರದಿಯ ಬಗ್ಗೆ ಯಾವುದೇ ಸಚಿವ ವಿರೋಧ ವ್ಯಕ್ತಪಡಿಸಿಲ್ಲ, ಅವರಿಗೆ ಇರುವ ಸಂದೇಹಗಳನ್ನು ಸಭೆಯಲ್ಲಿ ವ್ಯಕ್ತಪಡಿಸಿದ್ದಾರೆ, ಬೇರೆ ಕೆಲವರು ಮತ್ತಷ್ಟು ವಿವರಗಳನ್ನು ಕೇಳಿದ್ದಾರೆ, ವರದಿಯನ್ನು ಅರ್ಥಮಾಡಿಕೊಳ್ಳಲು ಮತ್ತಷ್ಟು ಕಾಲಾವಕಾಶ ಬೇಕು ಅಂತ ಅವರು ಹೇಳಿದ್ದಾರೆ, ಸರಳವಾಗಿ ಹೇಳಬೇಕೆಂದರೆ ಸಭೆಯಲ್ಲಿ ಚರ್ಚೆ ಅಪೂರ್ಣವಾಗಿದೆ ಎಂದು ಸಚಿವ ರಾಜಣ್ಣ ಹೇಳಿದರು

ಬೆಂಗಳೂರು, ಏಪ್ರಿಲ್ 18: ಗುರುವಾರದಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಕುರಿತು ನಡೆದಿರುವ ಚರ್ಚೆ ಅಪೂರ್ಣವಾಗಿದೆ ಎಂದು ಸಹಕಾರ ಸಚಿವ ಕೆಎನ್ ರಾಜಣ್ಣ ಹೇಳಿದ್ದಾರೆ. ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತಾಡಿರುವ ಅವರು, ವರದಿಯ ಬಗ್ಗೆ ವಿಸ್ತೃವಾದ ಚರ್ಚೆ ನಡೆದಿದೆ, ಸಚಿವರೆಲ್ಲ ತಮ್ಮ ತಮ್ಮ ಅಭಿಪ್ರಾಯಗಳನ್ನು ಹೇಳಿದ್ದಾರೆ, ಕೆಲ ಸಚಿವರಿಗೆ ಎಲ್ಲ ವಿವರಗಳನ್ನು ಕೊಡುವುದು ಸಾಧ್ಯವಾಗಿಲ್ಲ, ಕೆಲವರಲ್ಲಿ ವರದಿಯ ಬಗ್ಗೆ ಗೊಂದಲಗಳಿವೆ, ಅವುಗಳನ್ನೆಲ್ಲ ನಿವಾರಿಸಿ ಮುಂದಿನ ಸಂಪುಟ ಸಭೆಯಲ್ಲಿ ಒಂದು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಇದನ್ನೂ ಓದಿ:  ಜಾತಿ ಗಣತಿ ವರದಿ ಜ್ವಾಲೆ: ಲಿಂಗಾಯತ ಸಚಿವರ ಸಭೆಯಲ್ಲಿ ಮಹತ್ವದ ನಿರ್ಣಯ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.