ಮುಖ್ಯಮಂತ್ರಿ ಬದಲಾವಣೆ ವಿಷಯ ಕೇವಲ ಮಾಧ್ಯಮಗಳಲ್ಲಿ ಮಾತ್ರ ಚರ್ಚೆ ಆಗುತ್ತಿದೆ: ಯತೀಂದ್ರ ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆಗಳ ಹಣವನ್ನು ಸರ್ಕಾರ ಫಲಾನುಭವಿಗಳ ಖಾತೆಗೆ ವರ್ಗಾಯಿಸದೆ ತಿಂಗಳುಗಳು ಕಳೆದಿರುವ ವಿಷಯಕ್ಕೆ ಸಂಬಂಧಿಸಿದಂತೆ ಮಾತಾಡಿದ ಯತೀಂದ್ರ, ಮುಖ್ಯಮಂತ್ರಿಯವರು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ, ಬಾಕಿಯಿರುವ ಎಲ್ಲ ತಿಂಗಳುಗಳ ಹಣವನ್ನು ಆದಷ್ಟು ಬೇಗ ವರ್ಗಾಯಿಸಿಲಾಗುವುದು ಎಂದು ಹೇಳಿದರು. ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಸ್ಕೀಮಿನ ಫಲಾನುಭವಿಗಳು ಸರ್ಕಾರದ ಧೋರಣೆ ಬಗ್ಗೆ ಕಿಡಿ ಕಾರುತ್ತಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಮತ್ತು ವಿಧಾನ ಪರಿಷತ್ ಸದಸ್ಯ ಡಾ ಯತೀಂದ್ರ ಸಿದ್ದರಾಮಯ್ಯ ಮುಖ್ಯಮಂತ್ರಿ ಬದಲಾವಣೆ ಇಲ್ಲ ಅಂತ ಮತ್ತೊಮ್ಮೆ ಹೇಳಿದ್ದಾರೆ, ಆದರೆ ಈ ಬಾರಿ ಬೇರೆ ರೀತಿಯಲ್ಲಿ ರೀತಿ ತನ್ನ ಮಾತನ್ನು ಅರುಹಿದ್ದಾರೆ. ಮುಖ್ಯಮಂತ್ರಿಯವರಿಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಹೈಕಮಾಂಡ್ ಹೇಳಿದೆ, ಹಾಗಾಗಿ ಅವರನ್ನು ಬದಲಾಯಿಸುವ ಪ್ರಶ್ನೆ ಉದ್ಭವಿಸಲ್ಲ, ಇದು ಕೇವಲ ಮಾಧ್ಯಮಗಳಲ್ಲಿ ಮಾತ್ರ ಆಗುತ್ತಿರುವ ಚರ್ಚೆ, ಹಾಗಾಗಿ ಮಾಧ್ಯಮಗಳು ಸಿಎಂ ಬದಲಾವಣೆ ಸುದ್ದಿಗಳ ಪ್ರಸಾರಕ್ಕೆ ತಡೆಹಾಕಬೇಕು ಎಂದು ಯತೀಂದ್ರ ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಯಾರ ಮೇಲೂ ನಮ್ಮ ನಂಬಿಕೆಯನ್ನು ಹೇರಲಾಗಲ್ಲ, ಅದು ವೈಯಕ್ತಿಕವಾದದ್ದು: ಯತೀಂದ್ರ ಸಿದ್ದರಾಮಯ್ಯ