AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರ್ವಜನಿಕರ ಗಮನಕ್ಕೆ: ಮೇ 9ರಂದು ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ

ಸಾರ್ವಜನಿಕರ ಗಮನಕ್ಕೆ: ಮೇ 9ರಂದು ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ

ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on: May 06, 2026 | 2:53 PM

Share

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (bs yediyurappa ) ಅವರ 50 ವರ್ಷದ ರಾಜಕೀಯ ಜೀವನ ಪೂರ್ಣಗೊಂಡ ಹಿನ್ನೆಲೆಯಲ್ಲಿ ಮೇ 9ರಂದು ಚಿತ್ರದುರ್ಗದಲ್ಲಿ ಭವ್ಯ “ಯಡಿಯೂರಪ್ಪ ಅಭಿಮಾನೋತ್ಸವ” (yediyurappa utsava) ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮಾದಾರ ಚನ್ನಯ್ಯ ಮಠದ ಬಳಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದ್ದು, ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸ್ವಾಮೀಜಿಗಳು ಪಾಲ್ಗೊಳ್ಳಲಿದ್ದಾರೆ. ಇನ್ನು ಈ ಕಾರ್ಯಕ್ರಮದಲ್ಲಿ 10 ಲಕ್ಷ ಜನ ಸೇರುವ ನಿರೀಕ್ಷೆಗಳಿವೆ. ಬೇರೆ ಬೇರೆ ಜಿಲ್ಲೆಗಳಿಂದ ಜನರನ್ನು ಕರೆತರಲು 10 ಸಾವಿರ ಬಸ್​​​ಗಳನ್ನ ಬುಕ್ ಮಾಡಲಾಗಿದೆ. ಹೀಗಾಗಿ ಸಾಮಾನ್ಯವಾಗಿ ಮೇ 9ರಂದು ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಗಳಿವೆ. ಆದ್ದರಿಂದ ಸಾರ್ವಜನಿಕರು ಅಂದು ಪ್ರಯಾಣವನ್ನು ಮುಂದೂಡುವುದು ಒಳಿತು.

ಚಿತ್ರದುರ್ಗ, (ಮೇ 06): ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (bs yediyurappa ) ಅವರ 50 ವರ್ಷದ ರಾಜಕೀಯ ಜೀವನ ಪೂರ್ಣಗೊಂಡ ಹಿನ್ನೆಲೆಯಲ್ಲಿ ಮೇ 9ರಂದು ಚಿತ್ರದುರ್ಗದಲ್ಲಿ ಭವ್ಯ “ಯಡಿಯೂರಪ್ಪ ಅಭಿಮಾನೋತ್ಸವ” (yediyurappa utsava) ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮಾದಾರ ಚನ್ನಯ್ಯ ಮಠದ ಬಳಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದ್ದು, ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸ್ವಾಮೀಜಿಗಳು ಪಾಲ್ಗೊಳ್ಳಲಿದ್ದಾರೆ. ಇನ್ನು ಈ ಕಾರ್ಯಕ್ರಮದಲ್ಲಿ 10 ಲಕ್ಷ ಜನ ಸೇರುವ ನಿರೀಕ್ಷೆಗಳಿವೆ. ಬೇರೆ ಬೇರೆ ಜಿಲ್ಲೆಗಳಿಂದ ಜನರನ್ನು ಕರೆತರಲು 10 ಸಾವಿರ ಬಸ್​​​ಗಳನ್ನ ಬುಕ್ ಮಾಡಲಾಗಿದೆ. ಹೀಗಾಗಿ ಸಾಮಾನ್ಯವಾಗಿ ಮೇ 9ರಂದು ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಗಳಿವೆ. ಆದ್ದರಿಂದ ಸಾರ್ವಜನಿಕರು ಅಂದು ಪ್ರಯಾಣವನ್ನು ಮುಂದೂಡುವುದು ಒಳಿತು.

ಇದನ್ನೂ ನೋಡಿ: ಮೇ 9ರಂದು ಚಿತ್ರದುರ್ಗದಲ್ಲಿ ಯಡಿಯೂರಪ್ಪೋತ್ಸವ, ಅಮಿತ್‌ ಶಾ ಭಾಗಿ ಸಾಧ್ಯತೆ

Follow Us
Basavaraj Mudnur
Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More