ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ!

Edited By:

Updated on: Mar 22, 2026 | 10:08 PM

ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಸಮರ ಈಗ ಕುತೂಹಲಕಾರಿ ತಿರುವು ಪಡೆದುಕೊಂಡಿದೆ. ಶಾಮನೂರು ಮೊಮ್ಮಗ ಸಮರ್ಥ್‌ಗೆ (Samarth Shamanur) ಕಾಂಗ್ರೆಸ್ ಟಿಕೆಟ್ ಘೋಷಣೆಯಾಗುತ್ತಿದ್ದಂತೆ, ಕ್ಷೇತ್ರದಲ್ಲಿ ಬಂಡಾಯದ ಬಾವುಟ ಹಾರಿದೆ. ಅಲ್ಪಸಂಖ್ಯಾತ ಸಮುದಾಯಕ್ಕೆ ಟಿಕೆಟ್ ನೀಡಬೇಕೆಂಬ ಬೇಡಿಕೆ ಕಡೆಗಣಿಸಿದ್ದಕ್ಕೆ ಮುಸ್ಲಿಂ ಮುಖಂಡರು (Muslim Leaders) ಕೆಂಡಾಮಂಡಲವಾಗಿದ್ದಾರೆ. ಈ ಬಾರಿ ಕಾಂಗ್ರೆಸ್‌ಗೆ (Congress) ತಕ್ಕ ಪಾಠ ಕಲಿಸ್ತೀವಿ ಎಂದು ಎಚ್ಚರಿಕೆ ನೀಡಿರುವ ಮುಖಂಡರು, ಉಪ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಬೆಂಬಲಿಸದಿರಲು ತೀರ್ಮಾನಿಸಿದ್ದಾರೆ. ಅಲ್ಲದೇ ಬಾಗಲಕೋಟೆ ಬೈ ಎಲೆಕ್ಷನ್​​​ ನಲ್ಲೂ ಸಹ ಮುಸ್ಲಿಮರು ಕಾಂಗ್ರೆಸ್​​ ಗೆ ಮತ ಹಾಕಬೇಡಿ ಎಂದು ಕರೆ ನೀಡಿದ್ದಾರೆ.

ದಾವಣಗೆರೆ, (ಮಾರ್ಚ್ 22): ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಸಮರ ಈಗ ಕುತೂಹಲಕಾರಿ ತಿರುವು ಪಡೆದುಕೊಂಡಿದೆ. ಶಾಮನೂರು ಮೊಮ್ಮಗ ಸಮರ್ಥ್‌ಗೆ (Samarth Shamanur) ಕಾಂಗ್ರೆಸ್ ಟಿಕೆಟ್ ಘೋಷಣೆಯಾಗುತ್ತಿದ್ದಂತೆ, ಕ್ಷೇತ್ರದಲ್ಲಿ ಬಂಡಾಯದ ಬಾವುಟ ಹಾರಿದೆ. ಅಲ್ಪಸಂಖ್ಯಾತ ಸಮುದಾಯಕ್ಕೆ ಟಿಕೆಟ್ ನೀಡಬೇಕೆಂಬ ಬೇಡಿಕೆ ಕಡೆಗಣಿಸಿದ್ದಕ್ಕೆ ಮುಸ್ಲಿಂ ಮುಖಂಡರು (Muslim Leaders) ಕೆಂಡಾಮಂಡಲವಾಗಿದ್ದಾರೆ. ಈ ಬಾರಿ ಕಾಂಗ್ರೆಸ್‌ಗೆ (Congress) ತಕ್ಕ ಪಾಠ ಕಲಿಸ್ತೀವಿ ಎಂದು ಎಚ್ಚರಿಕೆ ನೀಡಿರುವ ಮುಖಂಡರು, ಉಪ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಬೆಂಬಲಿಸದಿರಲು ತೀರ್ಮಾನಿಸಿದ್ದಾರೆ. ಅಲ್ಲದೇ ಬಾಗಲಕೋಟೆ ಬೈ ಎಲೆಕ್ಷನ್​​​ ನಲ್ಲೂ ಸಹ ಮುಸ್ಲಿಮರು ಕಾಂಗ್ರೆಸ್​​ ಗೆ ಮತ ಹಾಕಬೇಡಿ ಎಂದು ಕರೆ ನೀಡಿದ್ದಾರೆ.

ಇದನ್ನೂ ಓದಿ: ದಾವಣಗೆರೆ ಕಾಂಗ್ರೆಸ್​​ನಲ್ಲಿ ಭುಗಿಲೆದ್ದ ಬಂಡಾಯ: ಹೈಕಮಾಂಡ್​ಗೆ ಪೈಲ್ವಾನ್ ಸವಾಲ್

Loading...
Unable to load recommendations.
Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More