ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧತೆ ಆರಂಭಿಸುವಂತೆ ಪಕ್ಷದ ಜಿಲ್ಲಾಧ್ಯಕ್ಷರಿಗೆ ಸೂಚಿಸಲಾಗಿದೆ: ಡಿಕೆ ಶಿವಕುಮಾರ್

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧತೆ ಆರಂಭಿಸುವಂತೆ ಪಕ್ಷದ ಜಿಲ್ಲಾಧ್ಯಕ್ಷರಿಗೆ ಸೂಚಿಸಲಾಗಿದೆ: ಡಿಕೆ ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ
|

Updated on:Jul 20, 2024 | 8:24 PM

ಈ ಸಲ ಉತ್ತಮ ಮಳೆಯಾಗಿರುವುದಕ್ಕೆ ಭಗವಂತನಿಗೆ ಕೃತಜ್ಞತೆ ಸಲ್ಲಿಸಿದ ಉಪ ಮುಖ್ಯಮಂತ್ರಿ ಶಿವಕುಮಾರ್ ಇನ್ನೆರಡು ದಿನಗಳಲ್ಲಿ ಕೆಆರ್ ಎಸ್ ಜಲಾಶಯ ತುಂಬುವ ಲಕ್ಷಣಗಳಿವೆ, ಕಾವೇರಿ ನೀರು ನಿರ್ವಹಣಾ ಸಮಿತಿಯ ಸೂಚನೆ ಮೇರೆಗೆ ತಮಿಳುನಾಡುಗೆ ಕಾವೇರಿ ನೀರು ಹರಿಸಲು ಯಾವುದೇ ಸಮಸ್ಯೆಯಾಗಲಾರದು ಎಂದರು.

ಬೆಂಗಳೂರು: ಇವತ್ತು ಮಧ್ಯಾಹ್ನ ಕೆಪಿಸಿಸಿ ಕಚೇರಿ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮತ್ತು ಪಕ್ಷದ ಜಿಲ್ಲಾಧ್ಯಕ್ಷರ ಸಭೆಯನ್ನು ಇವತ್ತು ನಡೆಸಲಾಯಿತು ಎಂದು ಹೇಳಿದರು. ಕೆಲವರು ಬಹಳ ವರ್ಷಗಳಿಂದ ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ ಮತ್ತು ಅವರಿಗೆ ಬಡ್ತಿಗಳನ್ನು ನೀಡಬೇಕಾಗಿದೆ, ಸ್ಥಳೀಯ ಸಂಘ ಸಂಸ್ಥೆಗಳಿಗೆ ಚುನಾವಣೆಗಳನ್ನು ನಡೆಸುವ ಬಗ್ಗೆ ಕೋರ್ಟ್ ಆದೇಶ ಇಷ್ಟರಲ್ಲೇ ಹೊರಬೀಳಬಹುದು, ಸಿದ್ಧತಗಳನ್ನು ಮಾಡಿಕೊಳ್ಳುವ ಬಗ್ಗೆ ಬ್ರೀಫ್ ಮಾಡಲಾಯಿತು ಎಂದು ಶಿವಕುಮಾರ್ ಹೇಳಿದರು. ಜಿಲ್ಲಾ ಮತ್ತು ಬ್ಲಾಕ್ ಕಾಂಗ್ರೆಸ್ ಪ್ರತ್ಯೇಕ ಕಚೇರಿಗಳನ್ನು ಹೊಂದಿರಬೇಕು, ಯಾವ ಕಾರಣಕ್ಕೂ ಸಭೆಗಳನ್ನು ಶಾಸಕರ ಮನೆಗಳಲ್ಲಿ ನಡೆಸಕೂಡದೆಂದು ಅಧ್ಯಕ್ಷರಿಗೆ ತಾಕೀತು ಮಾಡಲಾಗಿದೆ ಎಂದು ಅವರು ಹೇಳಿದರು.ಸಂಘಟನೆ ಕಾರ್ಯದಲ್ಲಿ ನಿಷ್ಕ್ರಿಯತೆ ತೋರುವ, ಸಕ್ರಿಯರಲ್ಲದ ಕಾರ್ಯಕರ್ತರಿಗೆ ಪಕ್ಷದಲ್ಲಿ ಸ್ಥಳವಿಲ್ಲ ಅಂತ ಸ್ಪಷ್ಟಪಡಿಸಲಾಗಿದೆ ಎಂದು ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ನಮ್ಮ ಅಧಿಕಾರಿಗಳು ಬಹಳ ಖದೀಮರಿದ್ದಾರೆ: ಡಿಸಿಎಂ ಡಿಕೆ ಶಿವಕುಮಾರ್

Published on: Jul 20, 2024 08:23 PM