ನಾಳೆಯ ಹವಾಮಾನ: ಕರ್ನಾಟಕದಲ್ಲಿ ಮೈಕೊರೆಯುವ ಚಳಿ ಜತೆ ಮಳೆ, ಎಲ್ಲೆಲ್ಲಿ?

Updated By: ರಮೇಶ್ ಬಿ. ಜವಳಗೇರಾ

Updated on: Nov 30, 2025 | 4:27 PM

Karnataka Weather Tomorrow: ದಿತ್ವಾ ಚಂಡಮಾರುತದ ಎಫೆಕ್ಟ್​ ಕರ್ನಾಟಕದ ಮೇಲೆ ಆಗಿದೆ. ಕರ್ನಾಟಕದ ಹಲವು ಜಿಲ್ಲೆಗಳಿಗೂ ಮಳೆಯ ಅಲರ್ಟ್ ನೀಡಲಾಗಿದೆ. ಬೆಂಗಳೂರಿನಲ್ಲಿ (Bengaluru) ಬೆಳಗ್ಗೆಯೇ ತುಂತುರು ಮಳೆಯಾಗಿದೆ. ಕಳೆದೆರಡು ದಿನಗಳಿಂದ ಶೀತ ಗಾಳಿ ಬೀಸುತ್ತಿದ್ದು, ಮೈ ಕೊರೆಯುವ ಚಳಿಗೆ ಜನರು ನಡುಗುತ್ತಿದ್ದಾರೆ ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ (Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು (ನವೆಂಬರ್ 30): ದಿತ್ವಾ ಚಂಡಮಾರುತದ ಎಫೆಕ್ಟ್​ ಕರ್ನಾಟಕದ ಮೇಲೆ  ಬೀರಿದೆ. ಕರ್ನಾಟಕದ ಹಲವು ಜಿಲ್ಲೆಗಳಿಗೂ ಮಳೆಯ ಅಲರ್ಟ್ ನೀಡಲಾಗಿದೆ. ಬೆಂಗಳೂರಿನಲ್ಲಿ (Bengaluru) ಬೆಳಗ್ಗೆಯೇ ತುಂತುರು ಮಳೆಯಾಗಿದೆ. ಕಳೆದೆರಡು ದಿನಗಳಿಂದ ಶೀತ ಗಾಳಿ ಬೀಸುತ್ತಿದ್ದು, ಮೈ ಕೊರೆಯುವ ಚಳಿಗೆ ಜನರು ನಡುಗುತ್ತಿದ್ದಾರೆ ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ (Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಸಂಬಂಧ ಇಂದು (ನವೆಂಬರ್ 30) ಹವಾಮಾನ ಇಲಾಖೆ ತಜ್ಞ ಸಿ.ಎಸ್​.ಪಾಟೀಲ್ ಪ್ರತಿಕ್ರಿಯಿಸಿದ್ದು, ತಮಿಳುನಾಡು ಕರಾವಳಿಗೆ ದಿತ್ವಾ ಚಂಡಮಾರುತ ಅಪ್ಪಳಿಸಿದೆ. ಹೀಗಾಗಿ ಮೈಕೊರೆಯುವ ಚಳಿ, ಮೋಡ ಕವಿದ ವಾತಾವರಣ ಸಾಧ್ಯತೆ ಇದೆ. ಬೆಂಗಳೂರು ನಗರ ಸೇರಿ ಅನೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಮುನ್ಸೂಚನೆ ನೀಡಿದ್ದಾರೆ.

ಯಾದಗಿರಿ, ರಾಯಚೂರು, ಕೊಪ್ಪಳ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ,
ಮೈಸೂರು, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಹಾಸನ, ಕೊಡಗು, ಚಿಕ್ಕಮಗಳೂರು, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ವಿಜಯನಗರ, ಉಡುಪಿ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್ ಮಳೆಯಾಗುವ ಸಾಧ್ಯತೆಗಳಿವೆ. ಇನ್ನು ಗದಗ, ಹಾವೇರಿ, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಜ್ಞ ಸಿ.ಎಸ್​.ಪಾಟೀಲ್ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Nov 30, 2025 04:24 PM