AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿ ಹಬ್ಬದ ಹಿನ್ನೆಲೆ ಕೆಆರ್ ಮಾರುಕಟ್ಟೆಯಲ್ಲಿ ಜನಸಾಗರ

ದೀಪಾವಳಿ ಹಬ್ಬದ ಹಿನ್ನೆಲೆ ಕೆಆರ್ ಮಾರುಕಟ್ಟೆಯಲ್ಲಿ ಜನಸಾಗರ

ಕಿರಣ್​ ಸೂರ್ಯ
| Edited By: |

Updated on:Nov 09, 2026 | 8:26 AM

Share

ದೀಪಾವಳಿ 2026 ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಜನಸಂದಣಿ ಕಂಡುಬಂದಿದೆ. ಹೂವು, ಹಣ್ಣು, ಪೂಜಾ ಸಾಮಾಗ್ರಿಗಳನ್ನು ಖರೀದಿಸಲು ಬೆಂಗಳೂರು ಮತ್ತು ಸುತ್ತಮುತ್ತಲಿನ ಜನರು ಆಗಮಿಸಿದ್ದಾರೆ. ಲಕ್ಷ್ಮಿ ಪೂಜೆ ಮತ್ತು ದೀಪಾವಳಿ ಅಮಾವಾಸ್ಯೆ ಕಾರಣದಿಂದ ಮಾರುಕಟ್ಟೆಯಲ್ಲಿ ಜನದಟ್ಟಣೆ ಹೆಚ್ಚಾಗಿದ್ದು, ರಸ್ತೆಗಳಲ್ಲಿ ಸಂಚಾರ ದಟ್ಟಣೆಯೂ ಉಂಟಾಗಿದೆ.

ಬೆಂಗಳೂರು, ನವೆಂಬರ್ 09: ದೀಪಾವಳಿ ಹಬ್ಬದ ಸಡಗರ ಬೆಂಗಳೂರಿನ ಕೆಆರ್ ಮಾರುಕಟ್ಟೆಯಲ್ಲಿ ಕಳೆಗಟ್ಟಿದೆ. ಹಬ್ಬದ ಖರೀದಿಗಾಗಿ ಜನಸಾಗರವೇ ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದು, ಭಾರಿ ಜನದಟ್ಟಣೆ ಕಂಡುಬಂದಿದೆ. ಮಧ್ಯರಾತ್ರಿಯಿಂದಲೇ ಮಾರುಕಟ್ಟೆಯಲ್ಲಿ ವ್ಯಾಪಾರ-ವಹಿವಾಟು ಭರ್ಜರಿಯಾಗಿ ನಡೆಯುತ್ತಿದೆ.

ಬೆಳಕಿನ ಹಬ್ಬ ದೀಪಾವಳಿಗಾಗಿ ಹೂವು, ಹಣ್ಣು, ಪೂಜಾ ಸಾಮಾಗ್ರಿಗಳನ್ನು ಖರೀದಿಸಲು ಬೆಂಗಳೂರು ಮತ್ತು ಸುತ್ತಮುತ್ತಲಿನ ಜನರು ಕೆಆರ್ ಮಾರುಕಟ್ಟೆಗೆ ಆಗಮಿಸಿದ್ದಾರೆ. ಲಕ್ಷ್ಮಿ ಪೂಜೆ ಮತ್ತು ದೀಪಾವಳಿ ಅಮಾವಾಸ್ಯೆ ಇರುವ ಕಾರಣ ಹೆಚ್ಚಿನ ಸಂಖ್ಯೆಯಲ್ಲಿ ಜನರು ತಮ್ಮ ಅಗತ್ಯ ವಸ್ತುಗಳನ್ನು ಖರೀದಿಸುತ್ತಿದ್ದಾರೆ. ಸಣ್ಣಪುಟ್ಟ ಮಾರುಕಟ್ಟೆಗಳಲ್ಲಿ ಎಲ್ಲಾ ರೀತಿಯ ವಸ್ತುಗಳು ಸಿಗುವುದಿಲ್ಲ ಎಂಬ ಕಾರಣಕ್ಕೆ ಬಹುತೇಕರು ಕೆಆರ್ ಮಾರುಕಟ್ಟೆಯತ್ತ ಮುಖ ಮಾಡಿದ್ದಾರೆ.

ಮಾರುಕಟ್ಟೆಯ ಸುತ್ತಮುತ್ತಲಿನ ರಸ್ತೆಗಳಲ್ಲಿ ಕೂಡ ವಾಹನ ದಟ್ಟಣೆ ಉಂಟಾಗಿದ್ದು, ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದಾರೆ. ಕೆಲವು ರಸ್ತೆಗಳನ್ನು ವ್ಯಾಪಾರಕ್ಕಾಗಿ ಬಂದ್ ಮಾಡಲಾಗಿದೆ. ಕೆಆರ್ ಮಾರುಕಟ್ಟೆ, ಟೌನ್‌ ಹಾಲ್, ಅವಿನ್ಯೂ ರೋಡ್, ಮೈಸೂರ್ ಬ್ಯಾಂಕ್ ಸರ್ಕಲ್ ಮತ್ತು ಮೆಜೆಸ್ಟಿಕ್‌ಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ದಟ್ಟಣೆ ಹೆಚ್ಚಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Nov 09, 2026 08:26 AM

Follow Us
ಕಿರಣ್​ ಸೂರ್ಯ
ಕಿರಣ್​ ಸೂರ್ಯ

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More