ಇಲ್ಲಿ ಪರಸ್ಪರ ಸಗಣಿ ಗಟ್ಟಿ ಎಸೆದುಕೊಳ್ಳೋದೇ ಹಬ್ಬದ ಮಜಾ! ಸಕ್ಕರೆ ನಾಡು ಮಂಡ್ಯದಲ್ಲಿ ಸಗಣಿ ಓಕುಳಿ ಸಂಭ್ರಮ
ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಸಾಸಲು ಗ್ರಾಮದಲ್ಲಿ ವಿಶಿಷ್ಟ ಸಗಣಿ ಓಕುಳಿ ಆಚರಣೆ ನಡೆಯಿತು. ಸೋಮೇಶ್ವರ ದೇಗುಲದಲ್ಲಿ ಪೂಜೆ ಸಲ್ಲಿಸಿದ ಬಳಿಕ ಎರಡು ಗುಂಪುಗಳಾಗಿ ಗ್ರಾಮಸ್ಥರು ಪರಸ್ಪರ ಸಗಣಿ ಎರಚಿಕೊಂಡು ಸಂಭ್ರಮಿಸಿದರು. ಬಳಿಕ ಶಿವನ ವೇಷಧಾರಿ ಬಾಲಕನನ್ನು ಕತ್ತೆಯ ಮೇಲೆ ಕೂರಿಸಿ ಮೆರವಣಿಗೆ ನಡೆಸಲಾಯಿತು.
ಮಂಡ್ಯ, ನವೆಂಬರ್ 11: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಸಕ್ಕರೆ ನಾಡು ಮಂಡ್ಯದಲ್ಲಿ ವಿಶಿಷ್ಟವಾದ ಸಗಣಿ ಓಕುಳಿ ಸಂಭ್ರಮದಿಂದ ನಡೆಯಿತು. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಸಾಸಲು ಗ್ರಾಮದಲ್ಲಿ ಮಂಗಳವಾರ ಸಂಜೆ ಗ್ರಾಮಸ್ಥರು ವಿಶೇಷ ಆಚರಣೆಯಲ್ಲಿ ಪಾಲ್ಗೊಂಡರು. ಸಾಸಲು ಗ್ರಾಮದ ಸೋಮೇಶ್ವರ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸಗಣಿ ಓಕುಳಿ ಆಚರಣೆಗೆ ಚಾಲನೆ ನೀಡಲಾಯಿತು. ಎರಡು ಗುಂಪುಗಳಾಗಿ ವಿಭಜನೆಯಾದ ಗ್ರಾಮಸ್ಥರು ಪರಸ್ಪರ ಸಗಣಿ ಎರಚಿಕೊಂಡು ಸಂಭ್ರಮಿಸಿದರು.
ಬಳಿಕ ಬಾಲಕನಿಗೆ ಶಿವನ ವೇಷ ಧರಿಸಿ ಕತ್ತೆಯ ಮೇಲೆ ಮೆರವಣಿಗೆ ನಡೆಸಲಾಯಿತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ನಡೆದ ಈ ಮೆರವಣಿಗೆ ಗ್ರಾಮಸ್ಥರ ಗಮನ ಸೆಳೆಯಿತು. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಸಾಸಲು ಗ್ರಾಮದಲ್ಲಿ ನಡೆದ ಈ ವಿಶಿಷ್ಟ ಆಚರಣೆಯನ್ನು ಗ್ರಾಮಸ್ಥರು ಸಂಭ್ರಮದಿಂದ ಆಚರಿಸಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us