AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗದಲ್ಲಿ ಕೆಆರ್​ಡಿಎಲ್​ ಎಇಇ ಪತ್ರ ಬರೆದು ನಾಪತ್ತೆ ವಿಚಾರಕ್ಕೆ ಸಿಎಂ ರಿಯಾಕ್ಷನ್ ಹೀಗಿತ್ತು

ಗದಗದಲ್ಲಿ ಕೆಆರ್​ಡಿಎಲ್​ ಎಇಇ ಪತ್ರ ಬರೆದು ನಾಪತ್ತೆ ವಿಚಾರಕ್ಕೆ ಸಿಎಂ ರಿಯಾಕ್ಷನ್ ಹೀಗಿತ್ತು

ಭಾವನಾ ಹೆಗಡೆ
|

Updated on: Sep 27, 2026 | 1:07 PM

Share

ಗದಗದಲ್ಲಿ ಕಾಣೆಯಾಗಿರುವ KRIDL ಎಇಇ ಪ್ರಕರಣದ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಬಿಜೆಪಿ ಶಾಸಕರೊಬ್ಬರು ಅಧಿಕಾರಿಯ ವಿರುದ್ಧ ತನಿಖೆಗೆ ಆಗ್ರಹಿಸಿದ್ದು, ಕಚೇರಿ ಕೆಲಸದಲ್ಲಿ ಕಾನೂನು ಉಲ್ಲಂಘನೆ ಮತ್ತು ಕರ್ತವ್ಯ ಲೋಪದ ಆರೋಪಗಳು ಕೇಳಿಬಂದಿವೆ. ಅಧಿಕಾರಿ ಹಿಂದೆ ಸಹ ತಪ್ಪಿಸಿಕೊಂಡು ಹೋಗಿದ್ದ ಎನ್ನಲಾಗಿದ್ದು, ಪ್ರಸ್ತುತ ಹೈದರಾಬಾದ್‌ನಲ್ಲಿ ಆತನ ಚಲನವಲ ಪತ್ತೆಯಾಗಿದೆ. ಸಂಪೂರ್ಣ ತನಿಖೆಗೆ ಆದೇಶಿಸಲಾಗಿದೆ.

ಬೆಂಗಳೂರು, ಸೆಪ್ಟೆಂಬರ್ 27: ಗದಗ ಜಿಲ್ಲೆಯಲ್ಲಿ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ಎಇಇ) ಒಬ್ಬರು ಕಾಣೆಯಾಗಿರುವ ಕುರಿತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಕಾಣೆಯಾದ ಎಇಇ ವಿರುದ್ಧ ಸ್ಥಳೀಯ ಬಿಜೆಪಿ ಶಾಸಕರೊಬ್ಬರು ಸಂಪೂರ್ಣ ತನಿಖೆಗೆ ಆಗ್ರಹಿಸಿದ್ದಾರೆ ಎಂದು ಶಿವಕುಮಾರ್ ತಿಳಿಸಿದ್ದಾರೆ.

ಅಧಿಕಾರಿಯು ಕಾನೂನುಬದ್ಧವಾಗಿ ಕೆಲಸ ಮಾಡುತ್ತಿರಲಿಲ್ಲ ಎಂಬ ಆರೋಪಗಳು ಕೇಳಿಬಂದಿವೆ. ಸೈಟ್‌ಗಳಿಗೆ ಭೇಟಿ ನೀಡದಿರುವುದು ಹಾಗೂ ಕಾಮಗಾರಿಗಳ ವಿಡಿಯೋ ದಾಖಲಾತಿ ಮಾಡದಿರುವಂತಹ ಕರ್ತವ್ಯ ಲೋಪಗಳ ಆರೋಪಗಳು ಇವರ ಮೇಲಿವೆ. ಈ ಬಗ್ಗೆ ನಾಯಕ್ ಎಂಬುವರು ಎರಡು-ಮೂರು ಬಾರಿ ದೂರು ನೀಡಿದ್ದರು.

ಈ ಹಿಂದೆ ಕೂಡ ಅಧಿಕಾರಿ 15 ದಿನಗಳ ಕಾಲ ತಪ್ಪಿಸಿಕೊಂಡು ಹೋಗಿ ನಂತರ ಪತ್ತೆಯಾಗಿದ್ದನು ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಪ್ರಸ್ತುತ ಹೈದರಾಬಾದ್ ಮತ್ತು ಅಜ್ಮೀರ್ ಸುತ್ತಮುತ್ತ ಆತನ ಚಲನವಲವನ್ನು ಪತ್ತೆಹಚ್ಚಲಾಗಿದೆ. ಆತನನ್ನು ವಾಪಸ್ ಕರೆತಂದು ಸಂಪೂರ್ಣ ತನಿಖೆಗೆ ಒಳಪಡಿಸಲಾಗುವುದು ಎಂದು ಶಿವಕುಮಾರ್ ತಿಳಿಸಿದ್ದಾರೆ. ಕಾಮಗಾರಿಗಳಲ್ಲಿ ಪಾರದರ್ಶಕತೆ ಕಾಪಾಡುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More