ಮುಡಾ ಹಗರಣ: ರಾಜ್ಯಪಾಲರ ನೋಟಿಸ್ ವಿರುದ್ಧ ಸಚಿವರಿಂದ ಮಹತ್ವದ ಜಂಟಿ ಸುದ್ದಿಗೋಷ್ಠಿ ನೇರಪ್ರಸಾರ
ಸಂಪುಟ ಸಭೆ ಬಳಿಕ ಐವರು ಸಚಿವರು ವಿಧಾನಸೌಧದಲ್ಲಿ ಮಹತ್ವದ ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ. ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಡಾ ಹಗರಣದ ವರದಿ ನೀಡಲು ಸೂಚಿಸಿದ್ದು ಸಿಎಂ ಅವರನ್ನು ಹೊರತು ಪಡಿಸಿ ಡಿಕೆ ಶಿವಕುಮಾರ್ ಸಂಪುಟ ಸಭೆ ನಡೆಸಿದ್ದಾರೆ. ಸಭೆ ಬಳಿಕ ಸುದ್ದಿಗೋಷ್ಠಿ ನಡೆಯುತ್ತಿದೆ.
ಬೆಂಗಳೂರು, ಆಗಸ್ಟ್.01: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (MUDA) ಪತ್ನಿ ಪಾರ್ವತಿ ಅವರಿಗೆ ನಿವೇಶನ ಹಂಚಿಕೆ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ (Thawar Chand Gehlot) ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಂದ ಪ್ರತಿಕ್ರಿಯೆ ಕೇಳಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಹೆಚ್ಚಿನ ಮಾಹಿತಿ ಜೊತೆಗೆ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ. ಹೀಗಾಗಿ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅನುಪಸ್ಥಿತಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ನೇತೃತ್ವದಲ್ಲಿ ಸಂಪುಟ ಸಭೆ ನಡೆಸಲಾಗಿದ್ದು ಐವರು ಸಚಿವರು ಮಹತ್ವದ ಜಂಟಿ ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ.
ಇಂದು ನಡೆದ ಉಪಾಹಾರ ಕೂಟದ ಸಭೆಯಲ್ಲಿ ಸಂಪುಟ ಸಹೋದ್ಯೋಗಿಗಳು ಸಂಪೂರ್ಣ ಸಹಕಾರ ನೀಡಿದ್ದರು. ಯಾವುದೇ ಸಂದರ್ಭ ಎದುರಾದರೂ ನಿಮ್ಮ ಜತೆ ನಿಲ್ಲುತ್ತೇವೆಂದು ಅಭಯ ನೀಡಿದ್ದರು. ರಾಜ್ಯಪಾಲರು ನೀಡಿರುವ ನೋಟಿಸ್ ಕೂಡ ಕಾನೂನಾತ್ಮಕವಾಗಿ ಇಲ್ಲ. ನೋಟಿಸ್ ನೀಡಿರುವ ಸಂದರ್ಭದಲ್ಲಿ ಅನುಸರಿಸಿರುವ ಮಾರ್ಗ ಸರಿಯಾಗಿಲ್ಲ. ನೀವೇ ಆರೋಪಿ ಎಂದು ಬಿಂಬಿಸಿ ಶೋಕಾಸ್ ನೋಟಿಸ್ ನೀಡಲಾಗಿದೆ. ಹಾಗಾಗಿ ನಿಮ್ಮ ಜೊತೆ ನಾವು ಇರುತ್ತೇವೆಂದು ಅಭಯ ನೀಡಿದ್ದರು. ಸದ್ಯ ಈಗ ಡಿಕೆ ಶಿವಕುಮಾರ್ ಸಂಪುಟ ಸಭೆ ನಡೆಸಿ ಚರ್ಚಿಸಿ ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ.
ಡಿಕೆ ಶಿವಕುಮಾರ್, ಹೆಚ್ಕೆ ಪಾಟೀಲ್, ಡಾ.ಜಿ. ಪರಮೇಶ್ವರ್, ಕೃಷ್ಣ ಭೈರೇಗೌಡ, ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ಸೇರಿ ಪ್ರಮುಖರು ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದಾರೆ. ಸುದ್ದಿಗೋಷ್ಠಿ ಲೈವ್ ಇಲ್ಲಿ ವೀಕ್ಷಿಸಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ