ಕಾಂಗ್ರೆಸ್ ಶಾಸಕರಿಗೆ ₹50 ಕೋಟಿ ಆಫರ್, ಸಿದ್ದರಾಮಯ್ಯ ಮಾಡಿದ ಆರೋಪ ನಿಜವೆಂದ ಶಿವಕುಮಾರ್
ಕಾಂಗ್ರೆಸ್ ಶಾಸಕರಿಗೆ ತಲಾ ₹ 50 ಕೋಟಿಯ ಆಫರ್ ಒಡ್ಡಿರುವುದು ನಿಜವೆಂದು ಹೇಳಿದ ಶಿವಕುಮಾರ್, ಶಾಸಕರನ್ನು ಖರೀದಿಸಿ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆದಿದೆ, ಕೆಲ ಶಾಸಕರು ಅದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದೆ ಹೇಳಿದ್ದಾರೆ ಮತ್ತು ಅವರು ಮಾಧ್ಯಮದವರಿಗೆ ಅದನ್ನು ತಿಳಿಸಿದ್ದಾರೆ ಎಂದರು.
ಬೆಂಗಳೂರು: ಇವತ್ತು ಮಕ್ಕಳ ದಿನಾಚರಣೆಯ ಅಂಗವಾಗಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ ನಗರದಲ್ಲಿ ಬಿಬಿಎಂಪಿ ಶಾಲೆಗಳಲ್ಲಿ ಓದುವ ಮಕ್ಕಳನ್ನು ವಿಧಾನಸೌಧಕ್ಕೆ ಕರೆತಂದು ಅವರ ಬೇಕು ಬೇಡಗಳನ್ನು ಆಲಿಸಿದರು. ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಶಿವಕುಮಾರ್, ಮಕ್ಕಳ ದಿನಾಚರಣೆಯನ್ನು ವಿನೂತನವಾಗಿ ಆಚರಿಸುವ ಪ್ರಯತ್ನ ಸರ್ಕಾರದ ವತಿಯಿಂದ ಮಾಡಲಾಗಿದೆ ಎಂದು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಸರ್ಕಾರೀ ಕಾಮಗಾರಿಗಳಲ್ಲಿ ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ಕಲ್ಪಿಸುವ ಪ್ರಸ್ತಾವನೆ ಇಲ್ಲ: ಶಿವಕುಮಾರ್
Latest Videos