ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಜಂಟಿಯಾಗಿ ರಾಜ್ಯದ ಎಲ್ಲ ಕಾಂಗ್ರೆಸ್ ಕಾರ್ಯಕರ್ತರಿಗೆ ಒಂದು ವಿಡಿಯೋ ಸಂದೇಶವನ್ನು ಕಳಿಸಿದ್ದಾರೆ. ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಯಾಗುವ ಮೊದಲೇ ಕಾಂಗ್ರೆಸ್ ರಾಜ್ಯದ ಜನತೆಗೆ ಮೂರು ಆಶ್ವಾಸನೆಗಳು-200 ಯೂನಿಟ್ ಉಚಿತ ವಿದ್ಯುತ್, ಗೃಹಿಣಿಯರಿಗೆ ಮಾಸಿಕ ರೂ. 2,000 ಸಹಾಯ ಧನ ಮತ್ತು ಪ್ರತಿ ಕುಟುಂಬಕ್ಕೆ 10 ಕೆಜಿ ಅಕ್ಕಿ ಒದಗಿಸುವುದಾಗಿ ಹೇಳಿದೆ. ಇದಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಸಹಿ ಮಾಡಿರುವ ಗ್ಯಾರಂಟಿ ಕಾರ್ಡ್ ಗಳನ್ನು (Guarantee Card) ಪಕ್ಷ ತಯಾರು ಮಾಡಿದೆ ಮತ್ತು ಆ ಕಾರ್ಡ್ಗಳನ್ನು ಪ್ರತಿ ಗ್ರಾಮದ ಜನರಿಗೆ ತಲುಪಿಸುವಂತೆ ಇವರಿಬ್ಬರು ತಮ್ಮ ಕಾರ್ಯಕರ್ತರಿಗೆ ವಿಡಿಯೋದಲ್ಲಿ ಹೇಳುತ್ತಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ