ಪಕ್ಷದ ಆಶ್ವಾಸನೆಗಳ ಗ್ಯಾರಂಟಿ ಕಾರ್ಡ್ ರಾಜ್ಯದ ಎಲ್ಲ ಮನೆಗಳಿಗೆ ತಲುಪಿಸುವಂತೆ ಕಾರ್ಯಕರ್ತರಿಗೆ ಡಿಕೆ ಶಿವಕುಮಾರ, ಸಿದ್ದರಾಮಯ್ಯ ಸಂದೇಶ

ಅರುಣ್​ ಕುಮಾರ್​ ಬೆಳ್ಳಿ

Updated on: Mar 10, 2023 | 10:21 AM

ಕಾಂಗ್ರೆಸ್ ನೀಡಿರುವ ಆಶ್ವಾಸನೆಗಳಿಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಸಹಿ ಮಾಡಿರುವ ಗ್ಯಾರಂಟಿ ಕಾರ್ಡ್ ಗಳನ್ನು ತಯಾರು ಮಾಡಲಾಗಿದ್ದು ಆ ಕಾರ್ಡ್​ಗಳನ್ನು ಪ್ರತಿ ಗ್ರಾಮದ ಜನರಿಗೆ ತಲುಪಿಸುವಂತೆ ಇವರಿಬ್ಬರು ಕಾರ್ಯಕರ್ತರಿಗೆ ವಿಡಿಯೋದಲ್ಲಿ ಹೇಳುತ್ತಿದ್ದಾರೆ.

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಜಂಟಿಯಾಗಿ ರಾಜ್ಯದ ಎಲ್ಲ ಕಾಂಗ್ರೆಸ್ ಕಾರ್ಯಕರ್ತರಿಗೆ ಒಂದು ವಿಡಿಯೋ ಸಂದೇಶವನ್ನು ಕಳಿಸಿದ್ದಾರೆ. ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಯಾಗುವ ಮೊದಲೇ ಕಾಂಗ್ರೆಸ್ ರಾಜ್ಯದ ಜನತೆಗೆ ಮೂರು ಆಶ್ವಾಸನೆಗಳು-200 ಯೂನಿಟ್ ಉಚಿತ ವಿದ್ಯುತ್, ಗೃಹಿಣಿಯರಿಗೆ ಮಾಸಿಕ ರೂ. 2,000 ಸಹಾಯ ಧನ ಮತ್ತು ಪ್ರತಿ ಕುಟುಂಬಕ್ಕೆ 10 ಕೆಜಿ ಅಕ್ಕಿ ಒದಗಿಸುವುದಾಗಿ ಹೇಳಿದೆ. ಇದಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಸಹಿ ಮಾಡಿರುವ ಗ್ಯಾರಂಟಿ ಕಾರ್ಡ್ ಗಳನ್ನು (Guarantee Card) ಪಕ್ಷ ತಯಾರು ಮಾಡಿದೆ ಮತ್ತು ಆ ಕಾರ್ಡ್​ಗಳನ್ನು ಪ್ರತಿ ಗ್ರಾಮದ ಜನರಿಗೆ ತಲುಪಿಸುವಂತೆ ಇವರಿಬ್ಬರು ತಮ್ಮ ಕಾರ್ಯಕರ್ತರಿಗೆ ವಿಡಿಯೋದಲ್ಲಿ ಹೇಳುತ್ತಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Mar 10, 2023 10:21 AM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.