DK Shivakumar Apology: ವಿಧಾನಸಭೆಯಲ್ಲಿ ಆರ್​ಎಸ್​ಎಸ್ ಗೀತೆ ಹಾಡಿದ್ದಕ್ಕೆ ಕ್ಷಮೆಯಾಚಿಸಿದ ಡಿಕೆ ಶಿವಕುಮಾರ್

Updated on: Aug 26, 2025 | 12:28 PM

ಡಿಕೆ ಶಿವಕುಮಾರ್ ಕ್ಷಮೆ ಯಾಚನೆ ವಿಡಿಯೋ: ಕರ್ನಾಟಕ ವಿಧಾನಸಭೆಯಲ್ಲಿ ಆರ್​​​ಎಸ್​​ಎಸ್ ಗೀತೆ ಹಾಡಿದ ವಿಚಾರವಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಂಗಳವಾರ ಕ್ಷಮೆಯಾಚಿಸಿದ್ದಾರೆ. ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ತಮ್ಮ ಪಕ್ಷ ನಿಷ್ಠೆಯನ್ನು ಸಮರ್ಥಿಸಿಕೊಂಡರು. ಅಲ್ಲದೆ ಹುಟ್ಟಿದ್ದೂ ಕಾಂಗ್ರೆಸ್ಸಿಗನಾಗಿಯೇ, ಸಾಯುವುದು ಕೂಡ ಕಾಂಗ್ರೆಸ್ಸಿಗನಾಗಿಯೇ ಎಂದರು.

ಬೆಂಗಳೂರು, ಆಗಸ್ಟ್ 26: ಕರ್ನಾಟಕ ವಿಧಾನಸಭೆಯಲ್ಲಿ ಆರ್​ಎಸ್​ಎಸ್ ಗೀತೆ ಹಾಡಿದ್ದಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕ್ಷಮೆ ಯಾಚಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾನು ಯಾವುದೇ ತಪ್ಪು ಮಾಡಿಲ್ಲ. ವಿರೋಧ ಪಕ್ಷದ ಸಿದ್ಧಾಂತದ ಅರಿವಿದೆ ಎಂಬುದನ್ನು ನಿರೂಪಿಸಿವುದಕ್ಕಾಗಿ ಹಾಗೆ ಹೇಳಿದೆ ಅಷ್ಟೆ. ಆದರೂ, ಒಂದು ವೇಳೆ ತಪ್ಪು ಮಾಡಿದ್ದೇನೆ ಎಂದು ನೀವು ಭಾವಿಸುವುದೇ ಆದರೆ, ಎಲ್ಲ ಕಾಂಗ್ರೆಸ್ ನಾಯಕರ-ಕಾರ್ಯಕರ್ತರ, ಇಂಡಿ ಒಕ್ಕೂಟದ ನಾಯಕರ ಕ್ಷಮೆ ಕೇಳುತ್ತೇನೆ ಎಂದರು. ಅಲ್ಲದೆ, ಕಾಂಗ್ರೆಸ್ ಪಕ್ಷದ ಕುರಿತಾದ ತಮ್ಮ ನಿಷ್ಠೆಯನ್ನು ಮತ್ತೆ ಸ್ಪಷ್ಟಪಡಿಸಿದರು. ಅಲ್ಲದೆ, ಹೈಕಮಾಂಡ್ ಆಗಲೀ ಇತರ ಯಾರೂ ತಮ್ಮ ಕ್ಷಮೆ ಕೇಳಿಲ್ಲ ಎಂದರು. ಯಾರ ಮನಸನ್ನೂ ನೋಯಿಸುವ ಉದ್ದೇಶ ತಮಗಿಲ್ಲ ಎಂದೂ ಹೇಳಿದರು.

ಇದನ್ನೂ ಓದಿ: ನನ್ನ ಪಕ್ಷ ನಿಷ್ಠೆ ಪ್ರಶ್ನೆ ಮಾಡುವವರು ಮೂರ್ಖರು: ಆರ್​ಎಸ್​ಎಸ್ ಗೀತೆ ಹಾಡಿದ್ದಕ್ಕೆ ಟೀಕಿಸಿದವರಿಗೆ ಡಿಕೆ ಶಿವಕುಮಾರ್ ಖಡಕ್ ತಿರುಗೇಟು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Aug 26, 2025 12:14 PM
Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More