Loading video

ಕುಂಭಮೇಳಕ್ಕೆ ಅಷ್ಟು ಜನ ಬಂದ್ರೂ ಆಯೋಜನೆ ಚೆನ್ನಾಗಿತ್ತು: ಯೋಗಿ ಕಾರ್ಯ ವೈಖರಿಗೆ ಡಿಕೆಶಿ ಮೆಚ್ಚುಗೆ

|

Updated on: Feb 26, 2025 | 5:39 PM

ಕೋಟ್ಯಾಂತರ ಜನರು ಬರುವ ಪ್ರಯಾಗ್​ರಾಜ್​ನಲ್ಲಿ ಉತ್ತರ ಪ್ರದೇಶ ಸರ್ಕಾರ ಸರಿಯಾಗಿ ವ್ಯವಸ್ಥೆ ಮಾಡಿಲ್ಲ. ಕುಡಿಯಲು ನೀರಿಲ್ಲ, ಟಾಯ್ಲೇಟ್​ಗಳಿಗೆ ಭಕ್ತರು ಪರದಾಡಿದ್ದರು ಅಂತೆಲ್ಲಾ ಆರೋಪಗಳು ಕೇಳಿಬಂದಿದ್ದವು. ಆದ್ರೆ, ಈ ಎಲ್ಲಾ ಆರೋಪಗಳನ್ನು ಸ್ವತಃ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅಲ್ಲಗಳೆದಿದ್ದು, ಎಲ್ಲಾ ವ್ಯವಸ್ಥೆ ಚೆನ್ನಾಗಿತ್ತು ಎಂದು ಯೋಗಿ ಸರ್ಕಾರಕ್ಕೆ ಫುಲ್ ಮಾರ್ಕ್ಸ್​ ಕೊಟ್ಟಿದ್ದಾರೆ.

ಬೆಂಗಳೂರು, (ಫೆಬ್ರವರಿ 26): ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಸೋಮವಾರ ಪ್ರಯಾಗರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಭೇಟಿ ನೀಡಿ ಕೆಲವು ಹಿರಿಯ ಸಂತರೊಂದಿಗೆ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ ಬೆನ್ನಿಗೇ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು,ಗಂಗಾನದಿಯಲ್ಲಿ ಸ್ನಾನ ಮಾಡಿದರೆ ಬಡತನವು ಅಂತ್ಯಗೊಳ್ಳುತ್ತದೆಯೇ ಎಂದು ಪ್ರಶ್ನಿಸಿದ್ದರು. ಬಿಜೆಪಿ ನಾಯಕರು ಕ್ಯಾಮೆರಾಗಳಿಗೆ ಪೋಸ್ ನೀಡಲು ಸ್ನಾನಕ್ಕಾಗಿ ಪೈಪೋಟಿ ನಡೆಸುತ್ತಿದ್ದಾರೆ ಹೇಳಿದ್ದರು. ಖರ್ಗೆ ಅವರ ಈ ಮಾತುಗಳು ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳ ನಾಯಕರು, ಕಾರ್ಯಕರ್ತರು ಖರ್ಗೆ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದರು. ಇದಾದ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಪ್ರಯಾಗ್​ರಾಜ್​ ಹೋಗಿ ಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡಿದ್ದರು. ಈ ಮೂಲಕ ಬಿಜೆಪಿ ನಾಯಕರು ಡಿಕೆಶಿ ನಡೆಯನ್ನು ಇಟ್ಟುಕೊಂಡೇ ಖರ್ಗೆ ಅವರಿಗೆ ಟಾಂಗ್ ಕೊಟ್ಟಿದ್ದರು. ಇದರ ಮಧ್ಯ ಕೋಟ್ಯಾಂತರ ಜನರು ಬರುವ ಪ್ರಯಾಗ್​ರಾಜ್​ನಲ್ಲಿ ಉತ್ತರ ಪ್ರದೇಶ ಸರ್ಕಾರ ಸರಿಯಾಗಿ ವ್ಯವಸ್ಥೆ ಮಾಡಿಲ್ಲ. ಕುಡಿಯಲು ನೀರಿಲ್ಲ, ಟಾಯ್ಲೇಟ್​ಗಳಿಗೆ ಭಕ್ತರು ಪರದಾಡಿದ್ದರು ಅಂತೆಲ್ಲಾ ಆರೋಪಗಳು ಕೇಳಿಬಂದಿದ್ದವು. ಆದ್ರೆ, ಈ ಎಲ್ಲಾ ಆರೋಪಗಳನ್ನು ಸ್ವತಃ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅಲ್ಲಗಳೆದಿದ್ದು, ಎಲ್ಲಾ ವ್ಯವಸ್ಥೆ ಚೆನ್ನಾಗಿತ್ತು ಎಂದು ಯೋಗಿ ಸರ್ಕಾರಕ್ಕೆ ಫುಲ್ ಮಾರ್ಕ್ಸ್​ ಕೊಟ್ಟಿದ್ದಾರೆ.

Published on: Feb 26, 2025 05:36 PM