AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಮಾಣವಚಕ್ಕೆ ಸಿದ್ಧತೆ: ಜ್ಯೋತಿಷಿ  ಬಳಿ ಮುಹೂರ್ತ ಕೇಳಿದ ಡಿಕೆ ಶಿವಕುಮಾರ್

ಪ್ರಮಾಣವಚಕ್ಕೆ ಸಿದ್ಧತೆ: ಜ್ಯೋತಿಷಿ ಬಳಿ ಮುಹೂರ್ತ ಕೇಳಿದ ಡಿಕೆ ಶಿವಕುಮಾರ್

ರಮೇಶ್ ಬಿ. ಜವಳಗೇರಾ
|

Updated on: May 28, 2026 | 5:38 PM

Share

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ಗುದ್ದಾಟ ಕೊನೆಗೂ ಅಂತ್ಯಗೊಂಡಿದೆ. ಸಿದ್ದರಾಮಯ್ಯನವರು ಇಂದು (ಮೇ 28) ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಸಿದ್ದರಾಮಯ್ಯನವರ ಮೂರು ವರ್ಷಗಳ ರಾಜ್ಯಭಾರ ಅಂತ್ಯವಾಗಿದ್ದು, ಮುಂದಿನ ಸಿಎಂ ಡಿಕೆ ಶಿವಕುಮಾರ್ ಎನ್ನಲಾಗಿದೆ. ಹೀಗಾಗಿ ಡಿಕೆ ಶಿವಕುಮಾರ್ ಅವರು ಪ್ರಮಾಣವಚನಕ್ಕೆ ಸಕಲ ಸಿದ್ಧತೆ ನಡೆಸಿದ್ದು, ಪ್ರಮಾಣವಚನಕ್ಕೆ ಮುಹೂರ್ತ ನೀಡುವಂತೆ ಜ್ಯೋತಿಷಿ ಮೊರೆ ಹೋಗಿದ್ದಾರೆ.

ಮೈಸೂರು, (ಮೇ 28): ಕರ್ನಾಟಕ ರಾಜ್ಯ ರಾಜಕಾರಣದಲ್ಲಿ (Karnataka Poliitcs) ನಾಯಕತ್ವ ಬದಲಾವಣೆ ಗುದ್ದಾಟ ಕೊನೆಗೂ ಅಂತ್ಯಗೊಂಡಿದೆ. ಸಿದ್ದರಾಮಯ್ಯನವರು (Siddaramaiah) ಇಂದು (ಮೇ 28) ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಸಿದ್ದರಾಮಯ್ಯನವರ ಮೂರು ವರ್ಷಗಳ ರಾಜ್ಯಭಾರ ಅಂತ್ಯವಾಗಿದ್ದು, ಮುಂದಿನ ಸಿಎಂ ಡಿಕೆ ಶಿವಕುಮಾರ್ (DK Shivakumar) ಎನ್ನಲಾಗಿದೆ. ಹೀಗಾಗಿ ಡಿಕೆ ಶಿವಕುಮಾರ್ ಅವರು ಪ್ರಮಾಣವಚನಕ್ಕೆ ಸಕಲ ಸಿದ್ಧತೆ ನಡೆಸಿದ್ದು, ಪ್ರಮಾಣವಚನಕ್ಕೆ ಮುಹೂರ್ತ ನೀಡುವಂತೆ ಜ್ಯೋತಿಷಿ ಮೊರೆ ಹೋಗಿದ್ದಾರೆ.

ಹೌದು….ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದು, ಅಲ್ಲಿ ಹೈಕಮಾಂಡ್ ನಾಯಕರನ್ನ ಭೇಟಿ ಮಾಡಿ ಸಿಎಲ್​​ಪಿ ಸಭೆ, ಹೊಸ ಸಚಿವ ಸಂಪುಟ ಹಾಗೂ ಡಿಸಿಎಂ ಆಯ್ಕೆ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಅದಕ್ಕೂ ಮೊದಲ ಡಿಕೆ ಶಿವಕುಮಾರ್ ಅವರು ಜ್ಯೋತಿಷಿ ದ್ವಾರಕನಾಥ್ ಅವರಿಗೆ ದೂರವಾಣಿ ಕರೆ ಮಾಡಿ ಪ್ರಮಾಣವಚನಕ್ಕೆ ಒಳ್ಳೆ ಮುಹೂರ್ತ ನೋಡಿ ಎಂದು ಮನವಿ ಮಾಡಿದ್ದಾರೆ. ಮೂರು ಬೇರೆ ಬೇರೆ ದಿನಾಂಕಗಳನ್ನು ನೀಡುವಂತೆ ಮನವಿ ಮಾಡಿದ್ದು, ಪ್ರಮಾಣವಚನಕ್ಕೆ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಬರುವ ಎಲ್ಲಾ ಸಾಧ್ಯತೆಗಳಿವೆ. ಆದ್ರೆ, ಪ್ರಮಾಣವಚನ ಯಾವಾಗ ಏನು ಎನ್ನುವುದು ಮಾತ್ರ ಇನ್ನೂ ನಿಗೂಢವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More