Video: ಬ್ಯಾರಿಕೇಡ್ ಹತ್ತಿ ಪೊಲೀಸರ ಮೇಲೆ ಬಿದ್ದ ಡಿಕೆ ಶಿವಕುಮಾರ್! ಈಶ್ವರಪ್ಪ ರಾಜೀನಾಮೆಗೆ ಪ್ರತಿಭಟನೆ ವೇಳೆ ಘಟನೆ

TV9 Web
| Updated By: ganapathi bhat

Updated on:Apr 14, 2022 | 2:34 PM

ಬೆಂಗಳೂರಿನ ರೇಸ್‌ಕೋರ್ಸ್‌ ರಸ್ತೆಯ ಕಾಂಗ್ರೆಸ್ ಭವನದಿಂದ ಆರಂಭವಾಗಿದ್ದ ಪ್ರತಿಭಟನಾ ರಾಲಿ ಸಾಗುತ್ತಿತ್ತು. ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಹಿನ್ನೆಲೆ, ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನಾ ರಾಲಿ ನಡೆಸಲಾಗಿತ್ತು.

ಬೆಂಗಳೂರು: ಸಚಿವ ಕೆಎಸ್ ಈಶ್ವರಪ್ಪ ವಿರುದ್ಧ ನಡೆಯುತ್ತಿರುವ ಕಾಂಗ್ರೆಸ್ ನಾಯಕರ ಪ್ರತಿಭಟನಾ ಮೆರವಣಿಗೆಯನ್ನು ಪೊಲೀಸರು ತಡೆದಿದ್ದಾರೆ. ರೇಸ್‌ ಕೋರ್ಸ್‌ ರಸ್ತೆಯಲ್ಲಿ ಕೈ ನಾಯಕರ ರಾಲಿಗೆ ತಡೆ ಒಡ್ಡಲಾಗಿದೆ. ಪ್ರತಿಭಟನಾನಿರತ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿ ಕಾಂಗ್ರೆಸ್‌ ನಾಯಕರನ್ನು ವಶಕ್ಕೆ ಪಡೆಯಲಾಗಿದೆ. ಬೆಂಗಳೂರಿನ ರೇಸ್‌ಕೋರ್ಸ್‌ ರಸ್ತೆಯ ಕಾಂಗ್ರೆಸ್ ಭವನದಿಂದ ಆರಂಭವಾಗಿದ್ದ ಪ್ರತಿಭಟನಾ ರಾಲಿ ಸಾಗುತ್ತಿತ್ತು. ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಹಿನ್ನೆಲೆ, ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನಾ ರಾಲಿ ನಡೆಸಲಾಗಿತ್ತು.

ಬಳಿಕ ಇದೀಗ ವಿಧಾನಸೌಧದಲ್ಲಿ ಕಾಂಗ್ರೆಸ್ ಅಹೋರಾತ್ರಿ ಧರಣಿಗೆ ನಿರ್ಧಾರ ಮಾಡಿದೆ. ಸಚಿವ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಅಹೋರಾತ್ರಿ ಧರಣಿ ನಡೆಸುವ ಬಗ್ಗೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವರು ತೀರ್ಮಾನಿಸಿದ್ದಾರೆ. ಇತ್ತ ವಿಧಾನಸೌಧದಲ್ಲೇ ಸಿಎಂ ಬೊಮ್ಮಾಯಿಗೆ ಪ್ರತಿಭಟನೆಯ ಬಿಸಿ ತಾಗಿದೆ. ಸಿಎಂ ಬೊಮ್ಮಾಯಿ ಭಾಷಣ ಆರಂಭಿಸುತ್ತಿದ್ದಂತೆಯೇ ಸಭಿಕರ ಮಧ್ಯದಿಂದ ಓಡಿ ಬಂದು ಪ್ರತಿಭಟನಾಕಾರರು ಘೋಷಣೆ ಕೂಗಿದ್ದಾರೆ. ಎಲ್ಲಾ ಕಡೆ ಇದೇ ಮಾಡ್ತೀರಿ, ಈಗ ಸುಮ್ಮನಿರಿ ಎಂದು ಸಿಎಂ ಪ್ರತಿಕ್ರಿಯಿಸಿದ್ದಾರೆ. ಪ್ರತಿಭಟನಾಕಾರರನ್ನು ಪೊಲೀಸರು ಸ್ಥಳದಿಂದ ಕರೆದೊಯ್ದಿದ್ದಾರೆ.

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಕೆಎಸ್ ಈಶ್ವರಪ್ಪ 3 ದಿನ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡದಿರಲು ನಿರ್ಧಾರ ಮಾಡಿದ್ದಾರೆ. ಈ ಬಗ್ಗೆ ಶಿವಮೊಗ್ಗದಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿಕೆ ನೀಡಿದ್ದಾರೆ. ಈ ಎಲ್ಲ ಬೆಳವಣಿಗೆ ಕುರಿತು ಮೂರು ದಿನ ಮಾತನಾಡಲ್ಲ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಕೆಎಸ್ ಈಶ್ವರಪ್ಪ ಬಂಧನಕ್ಕೆ ಒತ್ತಾಯಿಸಿ ಕಾಂಗ್ರೆಸ್ ಮೆರವಣಿಗೆ; ಪ್ರತಿಭಟನಾನಿರತರನ್ನು ವಶಕ್ಕೆ ಪಡೆದ ಪೊಲೀಸರು

ಇದನ್ನೂ ಓದಿ: ಸಂತೋಷ್ ಆತ್ಮಹತ್ಯೆ, ಈಶ್ವರಪ್ಪ ವಿಚಾರದಲ್ಲಿ ಹೈಕಮಾಂಡ್ ಮಧ್ಯಪ್ರವೇಶ ಇಲ್ಲ: ಸಿಎಂ ಬಸವರಾಜ ಬೊಮ್ಮಾಯಿ

Published on: Apr 14, 2022 02:33 PM