ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್ ಕ್ಷೇತ್ರದ ಮೇಲೆ ಡಿಕೆ ಶಿವಕುಮಾರ್ಗೆ ಹೆಚ್ಚಾದ ಪ್ರೀತಿ, ಇದು ಬೈ ಎಲೆಕ್ಷನ್ ತಯಾರಿಯೇ?
ಯಶವಂತಪುರ ಕ್ಷೇತ್ರದ ಶಾಸಕ ಎಸ್.ಟಿ.ಸೋಮಶೇಖರ್ ಈಗಾಗಲೇ ಬಿಜೆಪಿಯಿಂದ ಒಂದು ಕಾಲು ಹೊರಗಿಟ್ಟಿದ್ದಾರೆ. ಎಸ್‌ಟಿಎಸ್ ಅವರ ಆಪ್ತರು, ಅನೇಕ ಬೆಂಬಲಿಗರು ಈಗಾಗಲೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಯಾವಾಗ ಬೇಕಾದ್ರೂ ಎಸ್‌ಟಿ.ಸೋಮಶೇಖರ್ ಕಾಂಗ್ರೆಸ್ ಸೇರುವ ಸಾಧ್ಯತೆಯಿದೆ. ಇದ್ರ ಬೆನ್ನಲ್ಲೇ ಎಸ್‌ಟಿ ಸೋಮಶೇಖರ್ ಕ್ಷೇತ್ರದ ಮೇಲೆ ಡಿಸಿಎಂ ಡಿಕೆಶಿವಕುಮಾರ್‌ಗೂ ಪ್ರೀತಿ ಹೆಚ್ಚಾಗಿದೆ.
ಬೆಂಗಳೂರು, (ಆಗಸ್ಟ್ 27): ಕಾಂಗ್ರೆಸ್ನ(Congress) ಆಪರೇಷನ್ ಹಸ್ತದ ಚಟುವಟಿಕೆ ಗುಟ್ಟಾಗಿಯೂ ಉಳಿದಿಲ್ಲ. ಎಸ್.ಟಿ ಸೋಮಶೇಖರ್(ST Somashekhar) ಕಳೆದ ವಾರವಷ್ಟೇ ಸಿಎಂ ಸಿದ್ದರಾಮಯ್ಯ(Siddaramaiah) ಭೇಟಿ ಮಾಡಿದ್ದ ವಿಚಾರ ಸಾಕಷ್ಟು ಸದ್ದು ಮಾಡಿತ್ತು. ಬಿಜೆಪಿ(BJP) ಬಿಟ್ಟು ವಾಪಸ್ ಕಾಂಗ್ರೆಸ್‌ಗೆ ತೆರಳುವ ಸುದ್ದಿಗೆ ಮತ್ತಷ್ಟು ಜೀವ ಬರುವಂತೆ ಮಾಡಿತ್ತು. ಯಶವಂತಪುರ ಕ್ಷೇತ್ರದ ಶಾಸಕ ಎಸ್.ಟಿ.ಸೋಮಶೇಖರ್ ಈಗಾಗಲೇ ಬಿಜೆಪಿಯಿಂದ ಒಂದು ಕಾಲು ಹೊರಗಿಟ್ಟಿದ್ದಾರೆ. ಎಸ್‌ಟಿಎಸ್ ಅವರ ಆಪ್ತರು, ಅನೇಕ ಬೆಂಬಲಿಗರು ಈಗಾಗಲೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಯಾವಾಗ ಬೇಕಾದ್ರೂ ಎಸ್‌ಟಿ.ಸೋಮಶೇಖರ್ ಕಾಂಗ್ರೆಸ್ ಸೇರುವ ಸಾಧ್ಯತೆಯಿದೆ. ಇದ್ರ ಬೆನ್ನಲ್ಲೇ ಎಸ್‌ಟಿ ಸೋಮಶೇಖರ್ ಕ್ಷೇತ್ರದ ಮೇಲೆ ಡಿಸಿಎಂ ಡಿಕೆಶಿವಕುಮಾರ್‌ಗೂ ಪ್ರೀತಿ ಹೆಚ್ಚಾಗಿದೆ. ಹೌದು…ಮೂರನೇ ಬಾರಿಗೆ ಎಸ್.ಟಿ ಸೋಮಶೇಖರ್ ಜೊತೆಗೆ ಖುದ್ದು ಡಿಕೆ ಶಿವಕುಮಾರ್ ಕನಕಪುರ ರಸ್ತೆಯ ಅಪಾರ್ಟ್ಮೆಂಟ್ ನಿವಾಸಿಗಳ ಅಹವಾಲು ಆಲಿಸಿಸುವ ಮೂಲಕ ಯಶವಂತಪುರ ಕ್ಷೇತ್ರದ ಮೇಲೆ ವಿಶೇಷ ಕಾಳಜಿ ತೋರಿಸಿದ್ದು, ಇದು ಉಪಚುನಾವಣೆಗೆ ತಯಾರಿ ಎನ್ನುವ ಮಾತುಗಳು ಕೇಳಿಬರುತ್ತಿವೆ.
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್

