ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆ ಶಿವಕುಮಾರ್ರಿಂದ ದೀರ್ಘದಂಡ ನಮಸ್ಕಾರ
ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ವಿಧಾನಸೌಧಕ್ಕೆ ಬಂದ ಡಿ.ಕೆ. ಶಿವಕುಮಾರ್ ಅವರು ಮೆಟ್ಟಿಲುಗಳಿಗೆ ತಲೆಬಾಗಿ ನಮಸ್ಕರಿಸಿ ಒಳಗೆ ಪ್ರವೇಶಿಸಿದ್ದಾರೆ. ಪ್ರಮಾಣವಚನದ ಬಳಿಕ ಸಚಿವ ಸಂಪುಟದ ಸಹುದ್ಯೋಗಿಗಳ ಜೊತೆ ವಿಧಾನಸೌಧಕ್ಕೆ ತೆರಳಿದ್ದ ಅವರು ಚಪ್ಪಲಿ ಕಳಚಿ ನಮಸ್ಕರಿಸಿದ್ದು ಗಮನ ಸೆಳೆದಿದೆ.
ಬೆಂಗಳೂರು, ಜೂನ್ 03: ಮುಖ್ಯಮಂತ್ರಿ ಆದ ನಂತರ ಮೊದಲ ಬಾರಿಗೆ ವಿಧಾನಸೌಧಕ್ಕೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಂಬೇಡ್ಕರ್ ಪ್ರತಿಮೆಗೆ ನಮಿಸಿ ಪುಷ್ಪಾರ್ಚನೆ ಮಾಡಿದ್ದಾರೆ. ಬಸವಣ್ಣನ ಫೋಟೋಗೆ ನಮಿಸಿ ಪುಷ್ಪಾರ್ಚನೆ ಮಾಡಿದ ಡಿಕೆಶಿ, ಕೆಂಪೇಗೌಡರ ಮತ್ತು ಜವಾಹರ್ ಲಾಲ್ ನೆಹರು ಅವರು ಪ್ರತಿಮೆಗಳಿಗೂ ನಮಿಸಿ ಪುಷ್ಪಾರ್ಚನೆ ಮಾಡಿದ್ದಾರೆ. ಉತ್ತರ ಬಾಗಿಲಿನಿಂದ ವಿಧಾನಸೌಧ ಪ್ರವೇಶಿಸಿದ ಸಿಎಂ ಡಿಕೆಶಿ, ವಿಧಾನಸೌಧದ ಮೆಟ್ಟಿಲುಗಳಿಗೆ ದೀರ್ಘದಂಡ ನಮಸ್ಕಾರ ಮಾಡಿದ ಬಳಿಕ ಒಳಗೆ ಪ್ರವೆಶಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
