ಆತ್ಮೀಯ ಸ್ನೇಹಿತ, ಸಚಿವ ಡಿ.ಸುಧಾಕರ್ ಅಗಲಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಕಣ್ಣೀರು

Edited By:

Updated on: May 10, 2026 | 6:19 PM

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಚಿವ ಡಿ. ಸುಧಾಕರ್ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಡಿ. ಸುಧಾಕರ್ ಅವರ ಪಾರ್ಥಿವ ಶರೀರದ ದರ್ಶನ ಪಡೆದ ಡಿ.ಕೆ. ಶಿವಕುಮಾರ್ ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ. ಆತ್ಮೀಯ ಸ್ನೇಹಿತನ ಅಗಲಿಕೆಗೆ ಕಂಬನಿ ಮಿಡಿದ ಅವರು, ಸುಧಾಕರ್ ಅವರ ಪುತ್ರ ಸುಹಾಸ್​​ಗೆ ಸಾಂತ್ವಾನ ಹೇಳಿದ್ದಾರೆ.

ಚಿತ್ರದುರ್ಗ, ಮೇ 10: ಸಚಿವ ಡಿ. ಸುಧಾಕರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲು ಆಗಮಿಸಿದ ಡಿ.ಕೆ. ಶಿವಕುಮಾರ್ ಆತ್ಮೀಯ ಸ್ನೇಹಿತ ಕಂಡು ಬಿಕ್ಕಿ ಬಿಕ್ಕಿ ಅತ್ತ ಪ್ರಸಂಗ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಸುಧಾಕರ್​​ ಅವರ ಪಾರ್ಥಿವ ಶರೀರ ನೋಡುತ್ತಿದ್ದಂತೆ ದುಃಖ ತಡೆದುಕೊಳ್ಳಲಾಗದೆ ಡಿಕೆಶಿ ಕಣ್ಣೀರು ಹಾಕಿದ್ದಾರೆ. ಬಳಿಕ ಡಿ.ಸುಧಾಕರ್ ಪುತ್ರ ಸುಹಾಸ್ ಬೆನ್ನುತಟ್ಟಿ ಸಾಂತ್ವನ ಹೇಳಿದ್ದು, ಡಿಕೆಶಿ ನೋಡುತ್ತಿದ್ದಂತೆ ಡಿ.ಸುಧಾಕರ್ ಪುತ್ರ ಸುಹಾಸ್ ಕೂಡ ಭಾವುಕರಾಗಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us