AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕರ ಡಿನ್ನರ್ ಮೀಟಿಂಗ್ ಬಗ್ಗೆ ಮೌನ ಮುರಿದ ಡಿಕೆ ಶಿವಕುಮಾರ್: ಹೇಳಿದ್ದೇನು ನೋಡಿ!

ಶಾಸಕರ ಡಿನ್ನರ್ ಮೀಟಿಂಗ್ ಬಗ್ಗೆ ಮೌನ ಮುರಿದ ಡಿಕೆ ಶಿವಕುಮಾರ್: ಹೇಳಿದ್ದೇನು ನೋಡಿ!

ಗಣಪತಿ ಶರ್ಮಾ
|

Updated on: Feb 27, 2026 | 12:49 PM

Share

ಶಾಸಕ ಬಾಲಕೃಷ್ಣ ಅವರ ಜನ್ಮದಿನದ ನೆಪದಲ್ಲಿ 40ಕ್ಕೂ ಹೆಚ್ಚು ಶಾಸಕರು ಡಿನ್ನರ್ ಮೀಟಿಂಗ್ ಮಾಡಿದ್ದರ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಇದು ಶಕ್ತಿ ಪ್ರದರ್ಶನವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹೊಸಬರು ಮಂತ್ರಿ ಸ್ಥಾನದ ನಿರೀಕ್ಷೆಗಳಲ್ಲಿರುವುದು ಸಹಜ ಎಂದು ಅವರು ಅಭಿಪ್ರಾಯಪಟ್ಟರು. ಡಿಕೆಶಿ ಮಾತಿನ ವಿಡಿಯೋ ಇಲ್ಲಿದೆ.

ಬೆಂಗಳೂರು, ಫೆಬ್ರವರಿ 27: ಮಾಗಡಿ ಶಾಸಕ ಎಚ್​ಸಿ ಬಾಲಕೃಷ್ಣ ಜನ್ಮದಿನಾಚರಣೆಯ ನೆಪದಲ್ಲಿ ಗುರುವಾರ ರಾತ್ರಿ ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಡಿಕೆ ಶಿವಕುಮಾರ್ ಬೆಂಬಲಿಗರು ಡಿನ್ನರ್ ಮೀಟಿಂಗ್ ಆಯೋಜಿಸಿದ್ದರ ಬಗ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಇದು ಯಾವುದೇ ಶಕ್ತಿ ಪ್ರದರ್ಶನವಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಕೆಲವರು ವಿಶ್ರಾಂತಿಗೆ, ಕೆಲವರು ವಿದೇಶ ಪ್ರಯಾಣಕ್ಕೆ, ಇನ್ನು ಕೆಲವರು ದೆಹಲಿಗೆ ತೆರಳುತ್ತಾರೆ. ಇವೆಲ್ಲ ಅವರವರ ವೈಯಕ್ತಿಕ ವಿಚಾರಗಳು, ಪಕ್ಷಕ್ಕೂ ಇವುಗಳಿಗೂ ಸಂಬಂಧವಿಲ್ಲ ಎಂದು ಡಿಕೆಶಿ ಹೇಳಿದ್ದಾರೆ.

ಸಿಪಿ ಯೋಗೇಶ್ವರ್ ಮತ್ತು ಬಾಲಕೃಷ್ಣ ಅವರು ಡಿಸಿಎಂ ಡಿಕೆಶಿ ಸಿಎಂ ಆಗಬೇಕು ಎಂದು ಹೇಳಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿ, ‘ಹೊಸ ಶಾಸಕರಿಗೆ ಮಂತ್ರಿಯಾಗುವ ಆಸೆ ಇರುವುದು ಸಹಜ. ನಾನು, ಪರಮೇಶ್ವರ, ಹೆಚ್.ಕೆ. ಪಾಟೀಲ್, ಮಹದೇವಪ್ಪ, ಸಿದ್ದರಾಮಯ್ಯ ಮುಂತಾದ ಹಿರಿಯ ನಾಯಕರು ಚಿಕ್ಕ ವಯಸ್ಸಿನಲ್ಲೇ ಮಂತ್ರಿಗಳಾಗಿದ್ದವರು. ಹೀಗಾಗಿ, ಹೊಸಬರಲ್ಲಿ ಮಂತ್ರಿ ಸ್ಥಾನದ ಆಕಾಂಕ್ಷೆಗಳಿರುತ್ತವೆ. ನಮ್ಮನ್ನೂ ಮಂತ್ರಿ ಮಾಡಿ ಎಂದು ಕೆಲವರು ಕೇಳುತ್ತಾರೆ. ಇದು ಸಹಜ’ ಎಂದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us