AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆಶಿ ಸಚಿವ ಸಂಪುಟ ವಿಸ್ತರಣೆ ಸಂಬಂಧ ಮಹತ್ವದ ಸಭೆ: 12ರಿಂದ 15 ಹೊಸ ಮುಖಗಳಿಗೆ ಮಣೆ?

ಡಿಕೆಶಿ ಸಚಿವ ಸಂಪುಟ ವಿಸ್ತರಣೆ ಸಂಬಂಧ ಮಹತ್ವದ ಸಭೆ: 12ರಿಂದ 15 ಹೊಸ ಮುಖಗಳಿಗೆ ಮಣೆ?

ಪ್ರಸನ್ನ ಗಾಂವ್ಕರ್​
| Edited By: |

Updated on: Jul 27, 2026 | 11:27 AM

Share

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಅಂತಿಮಗೊಳಿಸಲು ಸಿಎಂ ಡಿ.ಕೆ. ಶಿವಕುಮಾರ್ ದೆಹಲಿಗೆ ತೆರಳಿದ್ದಾರೆ. ಹೈಕಮಾಂಡ್ ನಾಯಕರ ಜೊತೆ ಮಹತ್ವದ ಸಭೆ ನಡೆಯಲಿದ್ದು, ಸಿಎಂ ಡಿಕೆಶಿ, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಾಸ್​​​ ಈ ವೇಳೆ ಉಪಸ್ಥಿತರಿರಲಿದ್ದಾರೆ. ಇವರ ಜೊತೆ ಕೆ.ಸಿ. ವೇಣುಗೋಪಾಲ್ ಸಭೆ ನಡೆಸಲಿದ್ದು, ಹೊಸ ಮುಖಗಳಿಗೆ ಆದ್ಯತೆ ಮತ್ತು ವಿಶೇಷವಾಗಿ ಯುವ ಶಾಸಕರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ. ಈ ನಡುವೆ 30ಕ್ಕೂ ಹೆಚ್ಚು ಆಕಾಂಕ್ಷಿಗಳು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

ನವದೆಹಲಿ, ಜುಲೈ 27: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಸಂಬಂಧ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಗೆ ತೆರಳಿದ್ದಾರೆ. ಹೈಕಮಾಂಡ್ ನಾಯಕರೊಂದಿಗೆ ಈ ಕುರಿತು ಮಹತ್ವದ ಸಭೆ ನಡೆಯಲಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರೂ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರೊಂದಿಗೆ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಯಲಿದೆ. ಈ ನಡುವೆ ಸಚಿವ ಸ್ಥಾನದ ಆಕಾಂಕ್ಷಿಗಳು ದೆಹಲಿಯತ್ತ ಮುಖ ಮಾಡಿದ್ದರೆ, ಮುಖ್ಯಮಂತ್ರಿಗಳು ದೆಹಲಿಗೆ ತೆರಳುವ ಮುನ್ನ ಸಂತೋಷ್ ಲಾಡ್ ಮತ್ತು ಗಣೇಶ್ ಸೇರಿದಂತೆ ಹಲವು ಶಾಸಕರು ಅವರನ್ನು ಭೇಟಿಯಾಗಿ ತಮ್ಮ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದಾರೆ. ಈ ಬಾರಿ ಸಂಪುಟದಲ್ಲಿ ಹೊಸ ಮುಖಗಳಿಗೆ ಹೆಚ್ಚಿನ ಅವಕಾಶ ಸಿಗುವ ಸಾಧ್ಯತೆ ಇದೆ. 20 ಸಚಿವ ಸ್ಥಾನಗಳ ಪೈಕಿ 12ರಿಂದ 15 ಮಂದಿ ಹೊಸಬರು ಸೇರ್ಪಡೆಯಾಗಬಹುದು ಎಂದು ಮೂಲಗಳು ತಿಳಿಸಿವೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More