ನನ್ನ ಹುಳುಕು ಏನಿದೆ ಬಿಚ್ಚಿಡು, ನಿನ್ನದನ್ನು ನಾನು ಬಿಚ್ಚಿಡುತ್ತೇನೆ: ಕುಮಾರಸ್ವಾಮಿಗೆ ಡಿಕೆ ಶಿವಕುಮಾರ್ ಸವಾಲು
ಡಿಸಿಎಂ ಡಿಕೆ ಶಿವಕುಮಾರ್, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿಗೆ ಮತ್ತೊಮ್ಮೆ ಬಹಿರಂಗ ಚರ್ಚೆಗೆ ಸವಾಲು ಹಾಕಿದ್ದಾರೆ. ಹಿಟ್ ಆ್ಯಂಡ್ ರನ್ ಮತ್ತು ಬ್ಲ್ಯಾಕ್ಮೇಲ್ ನಿಲ್ಲಿಸಿ, ದಾಖಲೆ ಸಮೇತ ಚರ್ಚೆಗೆ ಬನ್ನಿ ಎಂದು ಆಗ್ರಹಿಸಿದ್ದಾರೆ. ತಮ್ಮ ಹುಳುಕುಗಳನ್ನು ಬಿಚ್ಚಿಟ್ಟರೆ, ತಾವು ಕೂಡ ಹೆಚ್‌ಡಿಕೆ ವಿಚಾರಗಳನ್ನು ಬಯಲು ಮಾಡುವುದಾಗಿ ತಿಳಿಸಿದ್ದಾರೆ.
ಬೆಂಗಳೂರು, ಅಕ್ಟೋಬರ್ 25: ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಮತ್ತು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಮಧ್ಯೆ ಮಾತಿನ ಯುದ್ಧ ತಾರಕಕ್ಕೇರಿದೆ. ನನ್ನ ಹುಳುಕು ಏನಿದೆ ಬಿಚ್ಚಿಡು, ನಿನ್ನದನ್ನು ನಾನು ಬಿಚ್ಚಿಡುತ್ತೇನೆ. ಅಂತಿಮವಾಗಿ ಜನ ತೀರ್ಮಾನ ಮಾಡುತ್ತಾರೆ ಎಂದು ಕುಮಾರಸ್ವಾಮಿಯನ್ನು ಬಹಿರಂಗ ಚರ್ಚೆಗೆ ಡಿಕೆ ಶಿವಕುಮಾರ್ ಆಹ್ವಾನಿಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos

