Karnataka Budget Session: ಸದನದಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತಾಡುವಾಗ ಶಿವಕುಮಾರ್ ಪಕ್ಷದ ಶಾಸಕನನ್ನು ಗದರಿದ್ದು ಯಾಕೆ ಗೊತ್ತಾ?

ಅರುಣ್​ ಕುಮಾರ್​ ಬೆಳ್ಳಿ

Updated on: Mar 11, 2025 | 2:08 PM

ಶಿವಕುಮಾರ್ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತಾಡುವಾಗ ನಡುವೆ ಬಾಯಿ ಹಾಕಿದ್ದು ಕೇವಲ ವಿರೋಧ ಪಕ್ಷದ ನಾಯಕರಲ್ಲ, ಆಡಳಿತ ಪಕ್ಷದ ಶಾಸಕರೊಬ್ಬರು ಎದ್ದು ನಿಂತು ಏನನ್ನೋ ಹೇಳಬಯಸಿದರು. ಆಗಲೇ ತಾಳ್ಮೆ ಕಳೆದುಕೊಂಡಿದ್ದ ಉಪ ಮುಖ್ಯಮಂತ್ರಿ, ಏಯ್ ನೀವು ಸ್ವಲ್ಪ ಸುಮ್ನಿರಿ, ಅವರ ಜೊತೆ ಸೇರಿ ನೀವ್ಯಾಕೆ ಬಾಯಿ ಮಾಡ್ತಾ ಇದ್ದೀರಿ ಅಂತ ಗದರುತ್ತಾರೆ.

ಬೆಂಗಳೂರು, ಮಾರ್ಚ್ 11: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತೊಮ್ಮೆ ಸದನದಲ್ಲಿ ಗ್ಯಾರಂಟಿ ಯೋಜನೆಗಳನ್ನು (Guarantee schemes) ಜಾರಿಗೆ ತಂದ ಹಿಂದಿನ ಉದ್ದೇಶದ ಬಗ್ಗೆ ಮಾತಾಡಿದರು. ಕಾಂಗ್ರೆಸ್ ಪಕ್ಷದ ನಾಯಕರು ದೇಶದ ಉದ್ದಗಲಕ್ಕೆ ಪ್ರವಾಸ ಮಾಡಿ ಬೆಲೆಯೇರಿಕೆಯಿಂದ ಜನ ತತ್ತರಿಸಿರುವುದನ್ನು ಮನಗಂಡ ಬಳಿಕ 5 ಗ್ಯಾರಂಟಿ ಯೋಜನೆ ತರುವ ನಿರ್ಧಾರ ಮಾಡಲಾಯಿತು ಎಂದು ಅವರು ಹೇಳಿದರು. ಅವರ ಮಾತಿಗೆ ವಿರೋಧ ಪಕ್ಷದ ನಾಯಕರು ವಿರೋಧ ವ್ಯಕ್ತಪಡಿಸಿದಾಗ, ಕೇಳೋದು ಬೇಕಿಲ್ಲ ಅಂದರೆ ಬಿಟ್ಟುಬಿಡಿ, ಅಧ್ಯಕ್ಷರು ಮಾತಾಡಲು ಕರೆದಿದ್ದಕ್ಕೆ ಮಾತಾಡುತ್ತಿದ್ದೇನೆ ಎಂದರು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  Karnataka Budget Session; ರನ್ಯಾ ರಾವ್ ಪ್ರಕರಣದಲ್ಲಿ ಸಚಿವರು ಶಾಮೀಲಾಗಿದ್ದರೆ ಸಿಬಿಐ ತನಿಖೆ ಮಾಡುತ್ತದೆ: ಪರಮೇಶ್ವರ್

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.