AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಕೋಗಿಲು ಲೇಔಟ್​ನಲ್ಲಿ ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು

ಬೆಂಗಳೂರು ಕೋಗಿಲು ಲೇಔಟ್​ನಲ್ಲಿ ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು

ಗಂಗಾಧರ​ ಬ. ಸಾಬೋಜಿ
|

Updated on: Dec 28, 2025 | 4:29 PM

Share

ಕೋಗಿಲು ಬಡಾವಣೆ ಮನೆಗಳ ತೆರವು ಪ್ರಕರಣದ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಅನಧಿಕೃತ ಶೆಡ್‌ಗಳನ್ನು ಸರ್ಕಾರಿ ಜಾಗದಲ್ಲಿ ನಿರ್ಮಿಸಲಾಗಿದ್ದು, ನಿಜವಾದ ಫಲಾನುಭವಿಗಳಿಗೆ ರಾಜೀವ್ ಗಾಂಧಿ ವಸತಿ ಯೋಜನೆಯಡಿ ಪುನರ್ವಸತಿ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ. ಕೆ.ಸಿ. ವೇಣುಗೋಪಾಲ್ ಅವರ ಸಲಹೆಯನ್ನು ಸಮರ್ಥಿಸಿಕೊಂಡು, ಬಿಜೆಪಿ ಟೀಕೆಗಳಿಗೆ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು, ಡಿಸೆಂಬರ್​ 28: ಹಲವರಿಂದ ಹಣ ಪಡೆದು ಓರ್ವ ಅಲ್ಲಿ ಶೆಡ್​ ಹಾಕಿದ್ದಾನೆ. ಹೀಗಾಗಿ ತೀರ್ಮಾನ ತೆಗೆದುಕೊಂಡು ನೋಟಿಸ್ ಕೊಟ್ಟಿದ್ದೇವೆ. ಅವರು ಸ್ಥಳೀಯರೇ ಆಗಿದ್ದರೆ ಪರಿಹಾರದ ಬಗ್ಗೆ ಚರ್ಚೆ ನಡೀತಿದೆ. ರಾಜೀವ್ ಗಾಂಧಿ ಹೌಸಿಂಗ್ ಸ್ಕೀಮ್‌ನಲ್ಲಿ ಪರಿಹಾರ ನೀಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆ.ಸಿ.ವೇಣುಗೋಪಾಲ್ ಎಐಸಿಸಿ ಜನರಲ್ ಸೆಕ್ರೆಟರಿ ಇದ್ದಾರೆ. ಅವರಿಗೆ ಸಲಹೆ ನೀಡೋದಕ್ಕೆ ಎಲ್ಲಾ ಅಧಿಕಾರ ಇದೆ. ಏನಾದರೂ ಇದ್ದರೆ ನಾವು ಸಲಹೆ ಪಡೆದುಕೊಳ್ಳುತ್ತೇವೆ, ಆದ್ರೆ ವೇಣುಗೋಪಾಲ್ ಅಧಿಕಾರದಲ್ಲಿ ಹಸ್ತಕ್ಷೇಪ ಮಾಡುತ್ತಿಲ್ಲ ಎಂದು ಹೇಳಿದ್ದಾರೆ.

ವರದಿ: ಈರಣ್ಣ ಬಸವ

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.