ದೆಹಲಿಯಲ್ಲಿ ತಮಿಳುನಾಡು ಸಿಎಂ ವಿಜಯ್​ ಜೊತೆ ಚರ್ಚಿಸಿದ್ದೇನು? ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು ನೋಡಿ

Updated on: Nov 17, 2026 | 12:39 PM

ದೆಹಲಿಯಲ್ಲಿ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಭೇಟಿಯ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ನಾವೆಲ್ಲರೂ ಭಾರತೀಯರು, ಭೇಟಿಯಾದರೆ ತಪ್ಪೇನು ಎಂದು ಡಿಕೆಶಿ ಪ್ರಶ್ನಿಸಿದರು. ಕಾವೇರಿ ನೀರಿನ ವಿಷಯದಲ್ಲಿ ಸುಪ್ರೀಂ ಕೋರ್ಟ್ ಆದೇಶ ಪಾಲನೆ ನಮ್ಮ ಬದ್ಧತೆ, ಮೇಕೆದಾಟು ಯೋಜನೆ ಎರಡೂ ರಾಜ್ಯಗಳಿಗೆ ಪ್ರಯೋಜನಕಾರಿ ಎಂದರು.

ಬೆಂಗಳೂರು, ನವೆಂಬರ್ 17: ದೆಹಲಿಯಲ್ಲಿ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಅಲ್ಲಿ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಜೊತೆಗಿನ ಭೇಟಿಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ‘ನಾವೆಲ್ಲರೂ ಸ್ನೇಹಿತರು, ನಾವೆಲ್ಲರೂ ಭಾರತೀಯರು’ ಎಂದು ಹೇಳಿದ ಅವರು, ಈ ಭೇಟಿಯ ಬಗ್ಗೆ ಹೆಚ್ಚು ಮಾತನಾಡಲು ಇಚ್ಛಿಸುವುದಿಲ್ಲ ಎಂದರು. ಮೇಕೆದಾಟು ಯೋಜನೆ ಹಾಗೂ ಕಾವೇರಿ ನದಿ ನೀರಿನ ವಿವಾದಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸುಪ್ರೀಂ ಕೋರ್ಟ್‌ನ ಆದೇಶ ಸ್ಪಷ್ಟವಾಗಿದ್ದು, 177 ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡಲು ಕರ್ನಾಟಕ ಬದ್ಧವಾಗಿದೆ. ಇದು ನಮ್ಮ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

ಮೇಕೆದಾಟು ಯೋಜನೆ ಕುರಿತು ಬಿಜೆಪಿ ಟೀಕಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ಮೇಕೆದಾಟು ಅಣೆಕಟ್ಟು ಕನಿಷ್ಠ ಜ್ಞಾನ ಇಲ್ಲದೆ ಮಾತನಾಡುವ ವಿಷಯವಲ್ಲ. ಯೋಜನೆಯಿಂದ ಮಂಡ್ಯ, ಮೈಸೂರು, ಹಾಸನ, ಬೆಂಗಳೂರು ಹಾಗೂ ತಮಿಳುನಾಡಿಗೂ ಸಹಾಯವಾಗಲಿದೆ ಎಂದು ಪ್ರತಿಪಾದಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More