ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ಲೈಟಿಂಗ್ಸ್

Edited By:

Updated on: Sep 10, 2026 | 9:59 AM

ಕಾಂಗ್ರೆಸ್ ಸರ್ಕಾರ ಅಧಿಕಾರ ಹಸ್ತಾಂತರದ ನಂತರ 100 ದಿನ ಪೂರೈಸಿದೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಡಳಿತ 100 ದಿನ ಪೂರೈಸಿರುವ ಸಂದರ್ಭದಲ್ಲಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಐತಿಹಾಸಿಕ ಕೆಆರ್​​ಎಸ್ ಡ್ಯಾಂನಲ್ಲಿ ಭರ್ಜರಿ ಲೈಟಿಂಗ್​ಸ್ ಅಲಂಕಾರ ಮಾಡಲಾಗಿದೆ. ಕೆಆರ್ಎಸ್ ಡ್ಯಾಂ ಲೈಟಿಂಗ್ಸ್ ವಿಡಿಯೋ ಇಲ್ಲಿದೆ.

ಮಂಡ್ಯ, ಸೆಪ್ಟೆಂಬರ್ 10: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರ 100 ದಿನ ಪೂರೈಸಿರುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಐತಿಹಾಸಿಕ ಕೃಷ್ಣರಾಜಸಾಗರ ಜಲಾಶಯವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ. ಈ ವಿಶೇಷ ಸಂಭ್ರಮಾಚರಣೆಗಾಗಿ ಅಣೆಕಟ್ಟು, ಕ್ರೆಸ್ಟ್ ಗೇಟ್‌ಗಳು ಹಾಗೂ ಜಲಾಶಯದ ಆವರಣದಲ್ಲಿರುವ ನಾಲ್ವಡಿ ಕೃಷ್ಣರಾಜ ಒಡೆಯರ್, ಸರ್ ಎಂ. ವಿಶ್ವೇಶ್ವರಯ್ಯ ಮತ್ತು ಕಾವೇರಿ ಮಾತೆಯ ಪ್ರತಿಮೆಗಳಿಗೆ ವರ್ಣರಂಜಿತ ದೀಪಾಲಂಕಾರ ಮಾಡಲಾಗಿದ್ದು, ಕೆ.ಆರ್.ಎಸ್ ಅಣೆಕಟ್ಟು ಕಣ್ಣುಕೋರೈಸುವಂತೆ ಕಂಗೊಳಿಸುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ದಿಲೀಪ್​, ಚೌಡಹಳ್ಳಿ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸಿದ್ದೇನೆ. ಸಧ್ಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More