ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಾಳೆ ದೆಹಲಿಗೆ ತೆರಳಲಿದ್ದು, ತಮ್ಮ ಇಲಾಖೆಗಳ ಪ್ರಮುಖ ಬಜೆಟ್ ಪೂರ್ವಭಾವಿ ಸಭೆಗೆ ಗೈರಾಗಲಿದ್ದಾರೆ. ಕೇಂದ್ರ ಸಚಿವರು ಮತ್ತು ಹೈಕಮಾಂಡ್ ಕರೆದಿದ್ದರಿಂದ ಭೇಟಿಗೆ ಹೋಗುತ್ತಿರುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ. ಆದರೆ, ಈ ಭೇಟಿ ರಾಜಕೀಯ ವಲಯದಲ್ಲಿ ಹಲವು ಕುತೂಹಲಗಳಿಗೆ ಕಾರಣವಾಗಿದೆ.
ಬೆಂಗಳೂರು, ಫೆಬ್ರವರಿ 09: ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಾಳೆ ನಡೆಯಬೇಕಿರುವ ಬಜೆಟ್ ಪೂರ್ವಭಾವಿ ಸಭೆಗೆ ಡಿಸಿಎಂ ಡಿಕೆ ಶಿವಕುಮಾರ್ ಗೈರುಹಾಜರಾಗುತ್ತಿರುವುದು ಸದ್ಯ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಜಲಸಂಪನ್ಮೂಲ ಮತ್ತು ಬೆಂಗಳೂರು ಅಭಿವೃದ್ಧಿ ಇಲಾಖೆಗಳಂತಹ ದೊಡ್ಡ ಖಾತೆಗಳನ್ನು ಹೊಂದಿರುವ ಡಿ.ಕೆ.ಶಿವಕುಮಾರ್ ನಾಳೆಯ ಸಭೆ ಬಿಟ್ಟು ದೆಹಲಿಗೆ ತೆರಳುತ್ತಿದ್ದಾರೆ. ಕೇಂದ್ರ ಸಚಿವರು ಮತ್ತು ಹೈಕಮಾಂಡ್ ಸದಸ್ಯರು ತಮ್ಮನ್ನು ಕರೆದಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದು, ಭೇಟಿ ಮಾಡುತ್ತಿರುವ ನಾಯಕರ ಹೆಸರು ಹೇಳಲು ಆಗಲ್ಲ ಎಂದು ಹೇಳಿದ್ದಾರೆ. ಜೊತೆಗೆ ದೆಹಲಿ ಭೇಟಿ ಬಗ್ಗೆ ಸಿಎಂ ಬಳಿ ಅನುಮತಿ ಪಡೆಯುವೆ ಎಂದಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos

